ಪರಿಷತ್ ಉಪಚುನಾವಣೆ : ದ.ಕ.-ಉಡುಪಿ ಜಿಲ್ಲೆಗಳಿಗೆ ಕೆಪಿಸಿಸಿ ಚುನಾವಣಾ ಉಸ್ತುವಾರಿಗಳ ನಿಯೋಜನೆ - Karavali Times ಪರಿಷತ್ ಉಪಚುನಾವಣೆ : ದ.ಕ.-ಉಡುಪಿ ಜಿಲ್ಲೆಗಳಿಗೆ ಕೆಪಿಸಿಸಿ ಚುನಾವಣಾ ಉಸ್ತುವಾರಿಗಳ ನಿಯೋಜನೆ - Karavali Times

728x90

11 October 2024

ಪರಿಷತ್ ಉಪಚುನಾವಣೆ : ದ.ಕ.-ಉಡುಪಿ ಜಿಲ್ಲೆಗಳಿಗೆ ಕೆಪಿಸಿಸಿ ಚುನಾವಣಾ ಉಸ್ತುವಾರಿಗಳ ನಿಯೋಜನೆ

ಮಂಗಳೂರು, ಅಕ್ಟೋಬರ್ 11, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಸ್ಥಳೀಯಾಡಳಿತ ಸಂಸ್ಥೆಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಕಾರ್ಯನಿರ್ವಹಿಸಲು, ಪ್ರಚಾರ ಕಾರ್ಯಗಳನ್ನು ಯಶಸ್ವಿಯಾಗಿ ನೋಡಿಕೊಳ್ಳಲು ಮತ್ತು ಕೆಪಿಸಿಸಿಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಉಭಯ ಜಿಲ್ಲೆಗಳಿಗೆ ಚುನಾವಣಾ ಉಸ್ತುವಾರಿಗಳನ್ನು ನಿಯೋಜಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶಿಸಿದ್ದಾರೆ.

ಉಡುಪಿ-ದಕ್ಷಿಣ ಕನ್ನಡ ವಿಧಾನ ಪರಿಷತ್ ಉಪಚುನಾವಣೆಯ ಉಸ್ತುವಾರಿಗಳಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ನಿಯೋಜಿಸಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿಗಳಾಗಿ ಮಾಜಿ ಸಚಿವರುಗಳಾದ ಬಿ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಜೆ ಆರ್ ಲೋಬೊ, ವಿಧಾನಸಭಾ ಅಭ್ಯರ್ಥಿಗಳಾದ ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಅಲಿ, ಜಿ ಕೃಷ್ಣಪ್ಪ, ಉಸ್ತುವಾರಿ ಪದಾಧಿಕಾರಿಗಳಾಗಿ ಕೆಪಿಸಿಸಿ ಉಪಾಧ್ಯಕ್ಷ ಎಂ ಸಿ ವೇಣುಗೋಪಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಹೆಗ್ಗಡೆ, ಜಿ ಎ ಬಾವ, ನಿವೇದಿತ್ ಆಳ್ವ, ಲಲಿತ್ ರಾಘವ್, ಜುಲ್ಫಿಕರ್ ಅಹಮದ್ ಖಾನ್, ಮಟಿಲ್ಡ ಡಿಸೋಜ, ಪ್ರವೀಣ್ ಪೀಟರ್, ಜಿಲ್ಲಾ ಸಂಚಾಲಕರಾಗಿ ಪದ್ಮರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಯೋಜಕರಾಗಿ ಬಿ ಬಾಲರಾಜ್ ಅವರನ್ನು ನಿಯೋಜಿಸಲಾಗಿದೆ.

ಉಡುಪಿ ಜಿಲ್ಲಾ ಉಸ್ತುವಾರಿಗಳಾಗಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಎಂಎಲ್ಸಿ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಶಾಸಕರಾದ ಕೆ ಗೋಪಾಲ ಪೂಜಾರಿ, ಸುಕುಮಾರ ಶೆಟ್ಟಿ, ವಿಧಾನಸಭಾ ಅಭ್ಯರ್ಥಿಗಳಾದ ಎಂ ದಿನೇಶ್ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಉದಯ ಶೆಟ್ಟಿ, ಉಸ್ತುವಾರಿ ಪದಾಧಿಕಾರಿಗಳಾಗಿ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ ಗೌಡ, ಇನಾಯತ್ ಅಲಿ, ಮಿಥುನ್ ರೈ, ರಕ್ಷಿತ್ ಶಿವರಾಂ, ಲಾವಣ್ಯ ಬಳ್ಳಾಲ್, ಜಿಲ್ಲಾ ಸಂಚಾಲಕರಾಗಿ ಜಯಪ್ರಕಾಶ್ ಹೆಗ್ಡೆ, ಕೆಪಿಸಿಸಿ ಕಾರ್ಯಾಧ್ಯಕ್ಷರ ಸಂಯೋಜಕರಾಗಿ ಎಂ ಎಸ್ ಮಹಮ್ಮದ್ ಅವರನ್ನು ನೇಮಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಪರಿಷತ್ ಉಪಚುನಾವಣೆ : ದ.ಕ.-ಉಡುಪಿ ಜಿಲ್ಲೆಗಳಿಗೆ ಕೆಪಿಸಿಸಿ ಚುನಾವಣಾ ಉಸ್ತುವಾರಿಗಳ ನಿಯೋಜನೆ Rating: 5 Reviewed By: karavali Times
Scroll to Top