ಮಂಗಳೂರು, ಅಕ್ಟೋಬರ್ 07, 2024 (ಕರಾವಳಿ ಟೈಮ್ಸ್) : ಭಾನುವಾರ ಮುಂಜಾನೆಯಿಂದ ಹಠಾತ್ ಕಾಣೆಯಾಗಿದ್ದ ಸುರತ್ಕಲ್ ಕ್ಷೇತ್ರದ ಮಾಜಿ ಕೈ ಶಾಸಕ ಬಿ ಎ ಮೊಯಿದಿನ್ ಬಾವಾ ಅವರ ಸಹೋದರ, ಉದ್ಯಮಿ ಬಿ ಎಂ ಮಮ್ತಾಝ್ ಅಲಿ ಅವರ ಮೃತದೇಹ ಕಾವೂರು ಪೆÇಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಬಳಿ ಫಲ್ಗುಣಿ ನದಿಯಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ಭಾನುವಾರ ಮುಂಜಾನೆ ಕೂಳೂರು ಸೇತುವೆ ಮೇಲೆ ಅಲಿ ಅವರ ಬಿಎಂಡಬ್ಲ್ಯ ಕಾರು ಅಪಘಾತ ನಡೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಮ್ತಾಝ್ ಅಲಿ ನಾಪತ್ತೆಯಾಗಿದ್ದರು. ನದಿಗೆ ಹಾರಿ ಆತ್ಮಹತ್ಯೆಗೈದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿ ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಕೋಸ್ಟ್ ಗಾರ್ಡ್ ಸೇರಿದಂತೆ ಸ್ಥಳೀಯ ನಾಡದೋಣಿ ಮೀನುಗಾರರು ಭಾನುವಾರ ಬೆಳಿಗ್ಗಿಂದಲೇ ಹುಡುಕಾಟ ಆರಂಭಿಸಿದ್ದರು.
ಮಂಗಳೂರು-ಕೂಳೂರು ಸೇತುವೆ ಬಳಿ ಬೆಳಿಗ್ಗೆ 10:40 ರ ಸುಮಾರಿಗೆ ಫಲ್ಗುಣಿ ನದಿಯಲ್ಲಿ ಮಮ್ತಾಝ್ ಅವರ ಮೃತದೇಹ ಪತ್ತೆಯಾಗಿದೆ. ಮುಮ್ತಾಝ್ ಅಲಿ ಅವರನ್ನು ನಿರಂತರವಾಗಿ ಬೆದರಿಸಿ, ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣವನ್ನು ಕಿತ್ತುಕೊಂಡು ಮತ್ತಷ್ಟು ಹಣಕ್ಕೆ ಬೇಡಿಕೆಯಿಟ್ಟ ಆರೋಪದಲ್ಲಿ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳ ವಿರುದ್ಧ ಈಗಾಗಲೇ ಕಾವೂರು ಪೆÇಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಭಾನುವಾರ ಮುಂಜಾನೆ ಮಂಗಳೂರಿನ ಕುಳೂರು ಸೇತುವೆ ಮೇಲೆ ಮುಮ್ತಾಜ್ ಅವರ ಕೆಎ19 ಎಂಜಿ0004 ನೋಂದಣಿ ಸಂಖ್ಯೆಯ ಬಿಎಂಡಬ್ಲ್ಯು ಕಾರು ಪತ್ತೆಯಾಗಿತ್ತು. ಇದರಿಂದ ನದಿಗೆ ಹಾರಿರುವ ಬಗ್ಗೆ ಶಂಕೆ ವ್ಯಕ್ತವಾಗಿ ಫಲ್ಗುಣಿ ನದಿಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಜ್ ಅಲಿ ಮೃತದೇಹ ಪತ್ತೆಯಾಗಿದೆ.
ಸಹೋದರನ ಸಾವಿನ ಬಗ್ಗೆ ತೀವ್ರ ನೊಂದುಕೊಂಡ ಮಾಜಿ ಶಾಸಕ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದ್ದಾರೆ. ಬ್ಲಾಕ್ ಮೇಲ್ ಕೃತ್ಯದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನು ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಆತನ ಫೆÇೀನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡಲಾಗುತ್ತಿದೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಲಿ ಎಂದು ಕಣ್ಣೀರು ಹಾಕಿದ್ದಾರೆ.
ಮೃತ ಮುಮ್ತಾಜ್ ಅಲಿ ಅವರು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ಮೊಯಿದ್ದೀನ್ ಬಾವ ಮತ್ತು ಜೆಡಿಎಸ್ ಮಾಜಿ ಎಂ ಎಲ್ ಸಿ ಆಗಿದ್ದ ಬಿ ಎಂ ಫಾರೂಕ್ ಅವರ ತಮ್ಮ. ಇವರು ಉದ್ಯಮ ಜೊತೆಗೆ ಶೈಕ್ಷಣಿಕ ಸಂಸ್ಥೆಗಳನ್ನು ನಡೆಸಿಕೊಂಡು ಬರುತ್ತಿದ್ದರು.
ಮಮ್ತಾಝ್ ಅಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಕೃಷ್ಣಾಪುರ-ಚೊಕ್ಕಬೆಟ್ಟುವಿನ ತರವಾಡು ಮನೆಗೆ ತರಲಾಗುತ್ತದೆ. ನಂತರ ಸಂಜೆ ವೇಳೆಗೆ ಕೃಷ್ಣಾಪುರ 7ನೇ ಬ್ಲಾಕಿನ ಈದ್ಗಾ ಮಸೀದಿಯಲ್ಲಿ ದಫನ ಕಾರ್ಯ ನಡೆಯಲಿದೆ ಎಂದು ತಿಳಿದು ಬಂದಿದೆ.
0 comments:
Post a Comment