ಬೆಂಗಳೂರು, ಅಕ್ಟೋಬರ್ 30, 2024 (ಕರಾವಳಿ ಟೈಮ್ಸ್) : ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮಹಾರಾಷ್ಟ್ರ ಸೌತ್ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳಿಗೆ ಎಐಸಿಸಿ ಉಸ್ತುವಾರಿಯಾಗಿ ಕರ್ನಾಟಕ ಸರಕಾರದ ಮಾಜಿ ಸಚಿವ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಉಪಾಧ್ಯಕ್ಷ ಬಿ. ರಮಾನಾಥ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರು ಮಾಜಿ ಸಚಿವ ರಮಾನಾಥ ರೈ ಅವರನ್ನು ಎಐಸಿಸಿ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
0 comments:
Post a Comment