ವಿಶೇಷ ಕಾರ್ಯಾಚರಣೆಯಲ್ಲಿ ಮನೆ ಕಳವು ಆರೋಪಿಗಳ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರ ತಂಡ - Karavali Times ವಿಶೇಷ ಕಾರ್ಯಾಚರಣೆಯಲ್ಲಿ ಮನೆ ಕಳವು ಆರೋಪಿಗಳ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರ ತಂಡ - Karavali Times

728x90

31 October 2024

ವಿಶೇಷ ಕಾರ್ಯಾಚರಣೆಯಲ್ಲಿ ಮನೆ ಕಳವು ಆರೋಪಿಗಳ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರ ತಂಡ

ಬಂಟ್ವಾಳ, ಅಕ್ಟೋಬರ್ 31, 2024 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಸರಹದ್ದಿನ ಕಳವು ಪ್ರಕರಣಗಳ ಪತ್ತೆಯಲ್ಲಿ ತೊಡಗಿದ್ದ ವಿಟ್ಲ ಠಾಣಾ ಅಪರಾದ ತಂಡದ ಸಿಬ್ಬಂದಿಗಳು ಮಾಣಿ ಗ್ರಾಮದ ಮಾಣಿ ಜಂಕ್ಷನ್ನಿನಲ್ಲಿ ಇಬ್ಬರು ಕಳ್ಳರನ್ನು ಮಂಗಳವಾರ ಬಂಧಿಸಿದ್ದು, ಬಂಧಿತ ಕಳ್ಳರನ್ನು ವಿಚಾರಣೆಗೊಳಪಡಿಸಿದಾಗ ವಿಟ್ಲ ಠಾಣಾ ವ್ಯಾಪ್ತಿಯ ಮಿತ್ತೂರು ಹಾಗೂ ಕೊಡಾಜೆ ಮನೆ ಕಳವು ಪ್ರಕರಣಗಳಲ್ಲಿ ಹಾಗೂ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿ ಕಳವು ಪ್ರಕರಣಗಳಲ್ಲಿ ಬಾಗಿಯಾಗಿರುವುದು ಪತ್ತೆಯಾಗಿದೆ. 

ಬಂಧಿತ ಆರೋಪಿಗಳನ್ನು ಉಳ್ಳಾಲ ತಾಲೂಕು, ಬೋಳಿಯಾರು ಗ್ರಾಮದ ಧರ್ಮನಗರ ನಿವಾಸಿ ಮಹಮ್ಮದ್ ರಿಯಾಜ್ ಹಸನಬ್ಬ ಅಲಿಯಾಸ್ ರಿಯಾಜ್ (38) ಹಾಗೂ ಉಳ್ಳಾಲ-ಹಳೆಕೋಟೆ ನಿವಾಸಿ ಮೊಹಮ್ಮದ್ ಇಂತಿಯಾಜ್ (38) ಎಂದು ಗುರುತಿಸಲಾಗಿದೆ. ಆರೋಪಿಗಳ ಪೈಕಿ ಮಹಮ್ಮದ್ ರಿಯಾಜ್ ಹಸನಬ್ಬ ಎಂಬಾತನ ವಿರುದ್ದ ಕೇರಳ ರಾಜ್ಯದ ಕುಂಬಳೆ  ಹಾಗೂ ಮಂಗಳೂರು ನಗರ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಸದ್ರಿ ಆರೋಪಿಗಳನ್ನು ಕೂಲಂಕುಷವಾಗಿ ವಿಚಾರಣೆ ನಡೆಸಿದ ವಿಟ್ಲ ಪೊಲೀಸರು ವಿಟ್ಲ ಪೊಲೀಸು ಠಾಣೆ ಹಾಗೂ ಪುತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ತಲಾ 2 ಪ್ರಕರಣಗಳಂತೆ ಒಟ್ಟು 4 ಪ್ರಕರಣಗಳನ್ನು ಬೇಧಿಸಿದ್ದಾರೆ. 

ಬಂಧಿತ ಆರೋಪಿಗಳಿಂದ 1.35 ಲಕ್ಷ ರೂಪಾಯಿ ಮೌಲ್ಯದ ಗ್ಯಾಸ್ ಸಿಲಿಂಡರ್ ಹಾಗೂ ಮನೆ ಸಾಮಗ್ರಿಗಳು ಹಾಗೂ ಕಳ್ಳತನಕ್ಕೆ ಉಪಯೋಗಿಸಿದ 1.50 ಲಕ್ಷ ರೂಪಾಯಿ ಮೌಲ್ಯದ ಕೆಎ 19 ಎಡಿ 0585 ನೊಂದಣಿ ನಂಬ್ರದ ಅಟೊ ರಿಕ್ಷಾ ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2.85 ಲಕ್ಷ ರೂಪಾಯಿಗಳು ಎಂದು ಅಂದಾಜಿಸಲಾಗಿದೆ. 

ಆರೋಪಿಗಳ ಪತ್ತೆ ಕಾರ್ಯಾಚರಣೆಯನ್ನು ಜಿಲ್ಲಾ ಎಸ್ಪಿ ಯತೀಶ್ ಎನ್ ಹಾಗೂ ಎಡಿಶನಲ್ ಎಸ್ಪಿ  ರಾಜೇಂದ್ರ ಡಿ ಎಸ್ ಅವರ ಮಾರ್ಗದರ್ಶನದಂತೆ, ಬಂಟ್ವಾಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್ ಅವರ  ನಿರ್ದೇಶನದಲ್ಲಿ, ವಿಟ್ಲ ಪೊಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಇ ಅವರ ನೇತೃತ್ವದಲ್ಲಿ ಪಿಎಸ್ಸೈಗಳಾದ ವಿದ್ಯಾ ಕೆ ಜೆ ರತ್ನ ಕುಮಾರ್, ಕೌಶಿಕ್, ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ, ರಕ್ಷಿತ್ ರೈ, ಶ್ರೀಧರ ಸಿ ಎಸ್, ಕೃಷ್ಣ ನಾಯ್ಕ್, ಗದಿಗೆಪ್ಪ ಕಲ್ಲೂರ, ಶಂಕರ ಶಂಶಿ, ಮನೋಜ್, ಸತೀಶ್, ಗಣಕ ಯಂತ್ರ ವಿಭಾಗದ ಸಂಪತ್, ದಿವಾಕರ್ ಅವರುಗಳ ತಂಡ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವಿಶೇಷ ಕಾರ್ಯಾಚರಣೆಯಲ್ಲಿ ಮನೆ ಕಳವು ಆರೋಪಿಗಳ ಹೆಡೆಮುರಿ ಕಟ್ಟಿದ ವಿಟ್ಲ ಪೊಲೀಸರ ತಂಡ Rating: 5 Reviewed By: karavali Times
Scroll to Top