ಪುತ್ತೂರು, ಅಕ್ಟೋಬರ್ 09, 2024 (ಕರಾವಳಿ ಟೈಮ್ಸ್) : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಬಂಧಿತ ವ್ಯಕ್ತಿಯನ್ನು ಇರ್ದೆ ಗ್ರಾಮದ ದೂಮಡ್ಕ ನಿವಾಸಿ ಮೆಹಬೂಬ್ (44) ಎಂದು ಹೆಸರಿಸಲಾಗಿದೆ. ಪುತ್ತೂರು ಕಸಬಾ ಗ್ರಾಮದ ಹಳೆ ನಿರಾಳ ಬಾರ್ ಹಿಂದುಗಡೆ ವ್ಯಕ್ತಿಯೊಬ್ಬ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಸ್ಥಳಕ್ಕಾಗಮಿಸಿದ ಪುತ್ತೂರು ನಗರ ಪೊಲೀಸ್ ಠಾಣಾ ಪಿಎಸ್ಸೈ ಆಂಜನೇಯ ರೆಡ್ಡಿ ಜಿ ವಿ ಅವರ ನೇತೃತ್ವದ ಪೊಲೀಸರು ಪರಿಶೀಲನೆ ನಡೆಸಿದಾಗ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಮಾದಕ ವಸ್ತು ಸೇವಿಸಿದಂತೆ ಸಂಶಯ ಕಂಡು ಬಂದ ಹಿನ್ನಲೆಯಲ್ಲಿ ಪೊಲೀಸರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ಪರೀಕ್ಷೆ ವೇಳೆ ಆತ ಅಮಲು ಪದಾರ್ಥ ಸೇವಿಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡು ಆತನ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
0 comments:
Post a Comment