ಬಂಟ್ವಾಳ, ಅಕ್ಟೋಬರ್ 04, 2024 (ಕರಾವಳಿ ಟೈಮ್ಸ್) : ತಾಲೂಕಿನ ತುಂಬೆ ಹಾಗೂ ಮಾರಿಪಳ್ಳದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಡಿ ಸುಮಾರು 20 ದೋಣಿಗಳನ್ನು ಅಧಿಕಾರಿಗಳು ಶುಕ್ರವಾರ ಮುಂಜಾನೆ ವಶಪಡಿಸಿಕೊಂಡಿದ್ದಾರೆ.
ತಾಲೂಕು ತಹಶೀಲ್ದಾರ್ ಅರ್ಚನಾ ಭಟ್, ಗಣಿ ಮತ್ತು ಭೂ ವಿಜ್ಞಾನ ಇಲಾಖಾಧಿಕಾರಿಗಳಾದ ಕೃಷ್ಣವೇಣಿ, ಗಿರೀಶ್ ಮೋಹನ್, ಮಾಧೇಶ್ವರ, ಪ್ರಶಾಂತ್ ಪಾಟೀಲ್, ಬಂಟ್ವಾಳ ಕಂದಾಯ ಇಲಾಖಾಧಿಕಾರಿಗಳಾದ ಜನಾರ್ದನ ಹಾಗೂ ಗ್ರಾಮ ಆಡಳಿತಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಮುಂಜಾನೆ ಈ ಕಾರ್ಯಾಚರಣೆ ನಡೆಸಿದ್ದಾರೆ.
ವಶಕ್ಕೆ ಪಡೆದುಕೊಂಡ ಎಲ್ಲಾ ಬೋಟ್‍ಗಳನ್ನು ನದಿ ಮಾರ್ಗವಾಗಿ ಮಂಗಳೂರು ಸಮೀಪದ ಅಡ್ಯಾರಿಗೆ ಸ್ಥಳಾಂತರಿಸಲಾಗಿದೆ ಎಂದು ತಹಶೀಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.
0 comments:
Post a Comment