ಸರಕಾರಿ ಕಚೇರಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಆದೇಶ - Karavali Times ಸರಕಾರಿ ಕಚೇರಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಆದೇಶ - Karavali Times

728x90

7 November 2024

ಸರಕಾರಿ ಕಚೇರಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಆದೇಶ

ಬೆಂಗಳೂರು, ನವೆಂಬರ್ 07, 2024 (ಕರಾವಳಿ ಟೈಮ್ಸ್) : ಸರಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣಗಳಲ್ಲಿ ಧೂಮಪಾನ ಇತರೆ ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ.

ಧೂಮಪಾನ ಹಾಗೂ ತಂಬಾಕಿನ ಇತರೆ ಉತ್ಪನ್ನಗಳ ಸೇವನೆಯು ಆರೋಗ್ಯಕ್ಕೆ ಮಾರಕವಾಗಿದ್ದು, ಸಾರ್ವಜನಿಕ ಪ್ರದೇಶಗಳಲ್ಲಿ ಇಂತಹ ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021ರ ನಿಯಮ-31ರಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಮಾದಕ ಪಾನೀಯ ಅಥವಾ ಮಾದಕ ವಸ್ತುವನ್ನು ಸೇವಿಸುವುದನ್ನು ಕೂಡ ನಿಷೇಧಿಸಲಾಗಿದೆ.

ಶಾಸನಾತ್ಮಕ ಎಚ್ಚರಿಕೆಗಳ ಹೊರತಾಗಿಯೂ ಸರಕಾರಿ ಕಛೇರಿಗಳಲ್ಲಿ ಹಾಗೂ ಕಛೇರಿಯ ಆವರಣದಲ್ಲಿ ತಂಬಾಕು ಉತ್ಪನ್ನಗಳ ಸೇವನೆ ಆಗುತ್ತಿರುವುದು ಸರಕಾರದ ಗಮನಕ್ಕೆ ಬಂದಿರುತ್ತದೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಪರೋಕ್ಷ ಧೂಮಪಾನದಿಂದ ಸಾರ್ವಜನಿಕರನ್ನು ಹಾಗೂ ಸರಕಾರಿ ಸಿಬ್ಬಂದಿಗಳನ್ನು ರಕ್ಷಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಅದರಂತೆ ಯಾವುದೇ ಸರಕಾರಿ ನೌಕರನು ಸರಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳ ಸೇವನೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಸಂಬಂಧ ಎಚ್ಚರಿಕೆಯ ಫಲಕವನ್ನು ಕಛೇರಿಯ ಸೂಕ್ತ ಸ್ಥಳಗಳಲ್ಲಿ ಪ್ರದರ್ಶಿಸತಕ್ಕದ್ದು. ಈ ಸೂಚನೆಗಳನ್ನು ಉಲ್ಲಂಘಿಸಿ ಯಾವುದೇ ಸರಕಾರಿ ನೌಕರ ಕಚೇರಿಯಲ್ಲಿ ಅಥವಾ ಕಚೇರಿಯ ಆವರಣದಲ್ಲಿ ಧೂಮಪಾನ ಮಾಡುವುದು ಮತ್ತು ಯಾವುದೇ ತಂಬಾಕು ಉತ್ಪನ್ನಗಳನ್ನು (ಗುಟ್ಕಾ, ಪಾನ್ ಮಸಾಲ, ಹೊಗೆ ಸೊಪ್ಪು ಇತ್ಯಾದಿ) ಸೇವಿಸುವುದು ಕಂಡುಬಂದಲ್ಲಿ ಅಂತಹ ನೌಕರರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಸರಕಾರಿ ಕಚೇರಿ ಹಾಗೂ ಕಚೇರಿ ಆವರಣದಲ್ಲಿ ಧೂಮಪಾನ, ತಂಬಾಕು ಉತ್ಪನ್ನಗಳ ಸೇವನೆ ನಿಷೇಧಿಸಿ ರಾಜ್ಯ ಸರಕಾರ ಆದೇಶ Rating: 5 Reviewed By: karavali Times
Scroll to Top