ಬಂಟ್ವಾಳ, ನವೆಂಬರ್ 11, 2024 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಬಂಟ್ವಾಳ ಘಟಕ ಹಾಗೂ ಮೆಲ್ಕಾರ್ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಜಂಟಿ ಆಶ್ರಯದಲ್ಲಿ ಪದವಿ ವಿದ್ಯಾರ್ಥಿಗಳಿಗಾಗಿ ಸಾಹಿತ್ಯ ಕಮ್ಮಟ-2024 ಕಾರ್ಯಕ್ರಮ ಮಾರ್ನಬೈಲುನಲ್ಲಿರುವ ಮೆಲ್ಕಾರ್ ಪದವಿ ಕಾಲೇಜು ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.
ಕಮ್ಮಟ ಉದ್ಘಾಟಿಸಿ ಮಾತನಾಡಿದ ಕನ್ನಡ ಸಹ ಪ್ರಾಧ್ಯಾಪಕ ಎಂ ಡಿ ಮಂಚಿ ಅವರು, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ, ಪ್ರತಿಭಾ ಪ್ರದರ್ಶನಕ್ಕೆ, ಸಾಹಿತ್ಯ ಬೆಳವಣಿಗೆಗೆ ಇಂತಹ ಕಮ್ಮಟಗಳು ಸಹಕಾರಿ ಎಂದರು.
ಮಕ್ಕಳ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕದ ಅಧ್ಯಕ್ಷೆ ಶ್ರೀಕಲಾ ಬಿ ಕಾರಂತ್ ಮಾತನಾಡಿ, ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗಳನ್ನು ಹೊರಗೆಡಹಲು ಇಂತಹ ಕಮ್ಮಟಗಳು ಸಹಕಾರಿಯಾಗಿದ್ದು ಪರಿಷತ್ತು ಅನೇಕ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸಾಹಿತ್ಯ ಚಟುವಟಿಗಳನ್ನು ನಡೆಸುತ್ತಾ ಬರುತ್ತಿದೆ ಎಂದರು.
ಕಾಲೇಜು ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್ ಅಧ್ಯಕ್ಷತೆ ವಹಿಸಿದ್ದರು. ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜು ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಹಾಗೂ ರಶ್ಮಿತಾ ಸುರೇಶ್ ಜೋಗಿಬೆಟ್ಟು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಉಪನ್ಯಾಸಕಿ ರಕ್ಷಿತಾ ಕುಮಾರಿ ಕವನ ವಾಚಿಸಿದರು. ವಿದ್ಯಾರ್ಥಿನಿಯರಾದ ವಜಿಲಾ ವಂದಿಸಿ, ಉಸೈದಾ ಕಾರ್ಯಕ್ರಮ ನಿರೂಪಿಸಿದರು.
0 comments:
Post a Comment