ಬಂಟ್ವಾಳ, ನವೆಂಬರ್ 30, 2024 (ಕರಾವಳಿ ಟೈಮ್ಸ್) : ತಾಲೂಕಿನ ಪುದು ಗ್ರಾಮದ ಫರಂಗಿಪೇಟೆ ಸಮೀಪದ ಕುಂಪಣಮಜಲು ಎಂಬಲ್ಲಿ ಮಾದಕ ವಸ್ತು ಸೇವನೆ ಮಾಡಿ ಸಾರ್ವಜನಿಕ ತೊಂದರೆ ನೀಡುತ್ತಿದ್ದ ಇಬ್ಬರು ಯುವಕರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತ ಯುವಕರನ್ನು ಪುದು ಗ್ರಾಮದ ನಿವಾಸಿಗಳಾದ ಮೊಹಮ್ಮದ್ ದಾವೂದ್ ಹಕೀಂ ಹಾಗೂ ಮೊಹಮ್ಮದ್ ಮುಸ್ತಾಫಾ (36) ಎಂದು ಹೆಸರಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಪುದು ಗ್ರಾಮದ ಕುಂಪಣಮಜಲು ಎಂಬಲ್ಲಿ ರಸ್ತೆಯಲ್ಲಿ ಯುವಕರು ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ಸೈ ಹರೀಶ್ ಎಂ ಆರ್ ನೇತೃತ್ವದ ಪೊಲೀಸರು ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಧಿತರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ದೃಢಪಟ್ಟ ಹಿನ್ನಲೆಯಲ್ಲಿ ಅವರ ವಿರುದ್ದ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಸುಳ್ಯ ಬಸ್ಸು ನಿಲ್ದಾಣ ಬಳಿ ಗಾಂಜಾ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದ ಆರೋಪಿ ಸುಳ್ಯ ಕಸಬಾ ಗ್ರಾಮದ ಜಯನಗರ-ಹಳೇಗೇಟು ನಿವಾಸಿ ಧನರಾಜ್ ಎ (30) ಎಂಬಾತನನ್ನು ಸುಳ್ಯ ಠಾಣಾ ಪಿಎಸ್ಸೈ ಸಂತೋಷ್ ಬಿ ಪಿ ಅವರ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನಲೆಯಲ್ಲಿ ಆತನ ವಿರುದ್ದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment