ದಕ್ಷಿಣ ಕನ್ನಡದಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಪಡೆದಿಲ್ಲ, ಸಾಮಾಜಿಕ ಜಾಲ ತಾಣಗಳಲ್ಲಿ ಕಟ್ಟು ಕಥೆ ಹರಡುವವರ ವಿರುದ್ದ ಕಠಿಣ ಕ್ರಮ : ಜಿಲ್ಲಾ ಎಸ್ಪಿ ಎಚ್ಚರಿಕೆ - Karavali Times ದಕ್ಷಿಣ ಕನ್ನಡದಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಪಡೆದಿಲ್ಲ, ಸಾಮಾಜಿಕ ಜಾಲ ತಾಣಗಳಲ್ಲಿ ಕಟ್ಟು ಕಥೆ ಹರಡುವವರ ವಿರುದ್ದ ಕಠಿಣ ಕ್ರಮ : ಜಿಲ್ಲಾ ಎಸ್ಪಿ ಎಚ್ಚರಿಕೆ - Karavali Times

728x90

6 November 2024

ದಕ್ಷಿಣ ಕನ್ನಡದಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಪಡೆದಿಲ್ಲ, ಸಾಮಾಜಿಕ ಜಾಲ ತಾಣಗಳಲ್ಲಿ ಕಟ್ಟು ಕಥೆ ಹರಡುವವರ ವಿರುದ್ದ ಕಠಿಣ ಕ್ರಮ : ಜಿಲ್ಲಾ ಎಸ್ಪಿ ಎಚ್ಚರಿಕೆ

ಮಂಗಳೂರು, ನವೆಂಬರ್ 06, 2024 (ಕರಾವಳಿ ಟೈಮ್ಸ್) :  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂದಿಸಿದಂತೆ ಚಡ್ಡಿ ಗ್ಯಾಂಗ್ ನಿಂದ ತಲಾವಾರು ತೋರಿಸಿ ಬೆದರಿಕೆ ಎಂಬ ಸುದ್ದಿಯು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು ಇದರ ಬಗ್ಗೆ ತನಿಖೆ ನಡೆಸಲಾಗಿ ಇದು 2 ವರ್ಷಗಳ ಹಿಂದೆ ಮಲಯಾಳಂನ ಮನೋರಮಾ ನ್ಯೂಸ್ ನಲ್ಲಿ ಪ್ರಸಾರಗೊಂಡ ಕೊಟ್ಟಾಯಂನಲ್ಲಿ ನಡೆದ ಒಂದು ಸ್ಟೋರಿಯಲ್ಲಿ ಬರುವ ಫೋಟೋಗಳಾಗಿದೆ. ಇದೊಂದು ಸಂಪೂರ್ಣ ಕಟ್ಟು ಕಥೆ ಆಗಿದೆ.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ. ಅಂತಹ ನೈಜ ಘಟನೆಗಳು ಸಂಭವಿಸಿದಲ್ಲಿ ತಕ್ಷಣ 112 ಗೆ ಕರೆ ಮಾಡಿ ದೂರು ನೀಡುವಂತೆ ಸಾರ್ವಜನಿಕರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್ ಅವರು ವಿನಂತಿಸಿದ್ದಾರೆ. 

ಈ ರೀತಿಯ ಹಳೆಯ ವಿಡಿಯೋ ಅಥವಾ ಫೋಟೋಗಳನ್ನು ಅವುಗಳ ಪೂರ್ವಾಪರ ಪರಿಶೀಲಿಸದೇ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿಸಿ ಸಮಾಜದ ಸ್ವಾಸ್ಥ್ಯ ಕೆಡಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೂಡಾ ಎಸ್ಪಿ ಅವರು ಇದೇ ವೇಳೆ ಎಚ್ಚರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡದಲ್ಲಿ ಚಡ್ಡಿ ಗ್ಯಾಂಗ್ ಎಂಟ್ರಿ ಪಡೆದಿಲ್ಲ, ಸಾಮಾಜಿಕ ಜಾಲ ತಾಣಗಳಲ್ಲಿ ಕಟ್ಟು ಕಥೆ ಹರಡುವವರ ವಿರುದ್ದ ಕಠಿಣ ಕ್ರಮ : ಜಿಲ್ಲಾ ಎಸ್ಪಿ ಎಚ್ಚರಿಕೆ Rating: 5 Reviewed By: karavali Times
Scroll to Top