ಮಂಗಳೂರು, ನವೆಂಬರ್ 30, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಘಟಕದ ಬಂಟ್ವಾಳ ಸಂಚಾರ ಪೊಲೀಸ್ ಠಾಣೆ ಮತ್ತು ಸುಬ್ರಹ್ಮಣ್ಯ ಪೊಲೀಸ್ ಠಾಣೆಗಳ ನೂತನ ಕಟ್ಟಡಗಳನ್ನು ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ನೂತನ ವಸತಿ ಸುಮುಚ್ಚಯಗಳನ್ನು ರಾಜ್ಯ ಗೃಹಮಂತ್ರಿ ಡಾ ಜಿ ಪರಮೇಶ್ವರ್ ಅವರು ಶನಿವಾರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ನಗರ ಪೆÇಲೀಸ್ ಕಮಿಷನರ್ ಅನುಪಮ್ ಅಗರ್‍ವಾಲ್, ದ ಕ ಜಿಲ್ಲಾ ಎಸ್ಪಿ ಯತೀಶ್ ಎನ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment