ಬಂಟ್ವಾಳ, ನವೆಂಬರ್ 05, 2024 (ಕರಾವಳಿ ಟೈಮ್ಸ್) : ಪುದು ಗ್ರಾಮದ ಸುಜೀರು ಶ್ರೀ ದೇವಕಿ ರವಳನಾಥ ಮಂದಿರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗ-ನಗದು ಕಳವುಗೈದ ಘಟನೆ ಸೋಮವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಈ ಬಗ್ಗೆ ದೇವಸ್ಥಾನದ ಆಡಳಿತದಾರ ಸುಜೀರು ರಮೇಶ್ ನಾಯಕ್ (70) ಅವರು ಬಂಟ್ವಾಳ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದು, ಇವರಿಗೆ ಸೋಮವಾರ ಮುಂಜಾನೆ ಮಾಹಿತಿ ಬಂದ ಮೇರೆಗೆ ದೇವಸ್ಥಾನಕ್ಕೆ ಬಂದು ನೋಡಿದಾಗ ದೇವಸ್ಥಾನದ ಬಾಗಿಲಿನ ಚಿಲಕವನ್ನು ಕಳ್ಳರು ಮುರಿದು ಒಳಗೆ ಪ್ರವೇಶಿಸಿ ಚಿನ್ನ ಹಾಗೂ ಬೆಳ್ಳಿಯ ಆಭರಣಗಳು, ಪೂಜಾ ಸಾಮಾಗ್ರಿಗಳನ್ನು, ಕಾಣಿಕೆ ಡಬ್ಬಿಗಳಲ್ಲಿದ್ದ ನಗದು ಹಣ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
1.50 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳು, 80 ಸಾವಿರ ರೂಪಾಯಿ ಮೌಲ್ಯದ ಬೆಳ್ಳಿಯ ಸೊತ್ತುಗಳು ಹಾಗೂ 5 ಸಾವಿರ ರೂಪಾಯಿ ನಗದು ಹಣ ಸೇರಿ ಒಟ್ಟು 2.35 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳು ಕಳವಾಗಿದೆ. ಭಾನುವಾರ ರಾತ್ರಿಯಿಂದ ಸೋಮವಾರ ಮುಂಜಾನೆಯ ಅವಧಿಯಲ್ಲಿ ಈ ಕಳವು ಕೃತ್ಯ ನಡೆದಿದ್ದು, ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment