20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನ ಕಳವು ಆರೋಪಿಯ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸರು - Karavali Times 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನ ಕಳವು ಆರೋಪಿಯ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸರು - Karavali Times

728x90

7 November 2024

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನ ಕಳವು ಆರೋಪಿಯ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸರು

 ಬಂಟ್ವಾಳ, ನವೆಂಬರ್ 07, 2024 (ಕರಾವಳಿ ಟೈಮ್ಸ್) : ತಾಲೂಕಿನ ಬಡಗಬೆಳ್ಳೂರು ಗ್ರಾಮದ ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2004 ರ ನವೆಂಬರ್ 7 ರಂದು ನಡೆದ ಕಳ್ಳತನ ಪ್ರಕರಣದಲ್ಲಿ ಆರೋಪಿತನಾಗಿ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡು ಕರ್ನಾಟಕದ ಹಲವೆಡೆ ಮತ್ತು ಕೇರಳ ರಾಜ್ಯದಲ್ಲಿ ಹಲವಾರು ಜಾಗದಲ್ಲಿ ವಿಳಾಸ ಬದಲಾವಣೆ ಮಾಡಿಕೊಂಡು   ಬಂಧನಕ್ಕೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿ, ಪುತ್ತೂರು ತಾಲೂಕು, ಪಾಣಾಜೆ ಗ್ರಾಮದ ನಿವಾಸಿ ಮೊಹಮ್ಮದ್ ಶರೀಫ್ (44) ಎಂಬಾತನನ್ನು ಬಂಟ್ವಾಳ ಪೊಲೀಸರು ಬುಧವಾರ ಕೇರಳ ರಾಜ್ಯದ ಕಾಸರಗೋಡಿನಲ್ಲಿ ವಶಕ್ಕೆ ಪಡೆಯುವಲ್ಲಿ ಸಫಲರಾಗಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. 

ಆರೋಪಿ ಇತ್ತೀಚಿಗೆ ಕೊಲೆ ಪ್ರಕರಣವೊಂದರಲ್ಲಿ ಕೇರಳದ ಮಂಜೇಶ್ವರ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಬಳಿಕ ಜಾಮೀನು ಬಿಡುಗಡೆಗೊಂಡಿದ್ದ ಎನ್ನಲಾಗಿದೆ. 

ಆರೋಪಿ ಪತ್ತೆ ಕಾರ್ಯದಲ್ಲಿ ಬಂಟ್ವಾಳ ಡಿವೈಎಸ್ಪಿ ವಿಜಯ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ  ನೇತೃತ್ವದಲ್ಲಿ ಪಿಎಸ್‍ಐಗಳಾದ ಹರೀಶ್ ಎಂ ಆರ್ ಮತ್ತು ಮೂರ್ತಿ ಹಾಗೂ ಸಿಬ್ಬಂದಿಗಳಾದ ಹರಿಶ್ಚಂದ್ರ ಮತ್ತು ಗಣೇಶ ಅವರ ತಂಡ ಪಾಲ್ಗೊಂಡಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದೇವಸ್ಥಾನ ಕಳವು ಆರೋಪಿಯ ದಸ್ತಗಿರಿ ಮಾಡಿದ ಬಂಟ್ವಾಳ ಪೊಲೀಸರು Rating: 5 Reviewed By: karavali Times
Scroll to Top