ಪುತ್ತೂರು, ಡಿಸೆಂಬರ್ 19, 2024 (ಕರಾವಳಿ ಟೈಮ್ಸ್) : ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ತಾಲೂಕು, ಕಬಕ ಗ್ರಾಮದ ಮುರ ಎಂಬಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ಬೈಕ್ ಸವಾರನನ್ನು ಅಬ್ದುಲ್ ಕುಂಞÂ (66) ಎಂದು ಹೆಸರಿಸಲಾಗಿದೆ. ಚೇತನ್ ಎಂಬವರು ಚಲಾಯಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ಪುತ್ತೂರು ಕಡೆಯಿಂದ ಕೆದಿಲ ಕಡೆಗೆ ಸಂಚರಿಸುತ್ತಿದ್ದ ಬೈಕಿಗೆ ಮುರ ಎಂಬಲ್ಲಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬೈಕ್ ಸವಾರ ಅಬ್ದುಲ್ ಕುಂಞÂ ಅವರು ಬೈಕ್ ಸಮೇತ ರಸ್ತೆಗೆ ಬಿದ್ದು, ಗಂಭೀರ ಗಾಯಗೊಂಡಿರುತ್ತಾರೆ. ತಕ್ಷಣ ಅವರನ್ನು ಪುತ್ತೂರು ಮಹಾವೀರ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment