ಮಂಗಳೂರು, ಜನವರಿ 01, 2025 (ಕರಾವಳಿ ಟೈಮ್ಸ್) : ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದ ಮುಂಭಾಗದ ಕ್ರೀಡಾಂಗಣದ ಬಳಿ ಬೃಹತ್ ಗಾತ್ರದ ಮರವೊಂದು ಬುಧವಾರ ಬೆಳಿಗ್ಗೆ 11 ಗಂಟೆ ವೇಳೆಗೆ ಉರುಳಿ ಬಿದ್ದಿದೆ. ವಿದ್ಯುತ್ ತಂತಿ, ಕಂಬಗಳ ಮೇಲೆಯೇ ಮರ ಉರುಳಿ ಬಿದ್ದಿದ್ದು, ಮೆಸ್ಕಾಂ ಸಂಸ್ಥೆಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಘಟನೆಯಿಂದ ಇಲ್ಲಿ ನಿಲ್ಲಿಸಲಾಗಿದ್ದ ವಾಹನಗಳು ಜಖಂ ಆಗಿದ್ದು, ಒಂದು ಕುಟುಂಬ ಅಪಾಯದಿಂದ ಪಾರಾಗಿದೆ. ಪರಿಣಾಮ ಪರಿಸರದಲ್ಲಿ ವಿದ್ಯುತ್, ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಹಾಗೂ ಮೆಸ್ಕಾಂ ಇಲಾಖಾ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ.
31 December 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment