ದಕ್ಷಿಣ ಕನ್ನಡ ಜಿಲ್ಲೆಯ 2 ಸೇತುವೆ ಸಹಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ : ಸಚಿವ ಗುಂಡೂರಾವ್ - Karavali Times ದಕ್ಷಿಣ ಕನ್ನಡ ಜಿಲ್ಲೆಯ 2 ಸೇತುವೆ ಸಹಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ : ಸಚಿವ ಗುಂಡೂರಾವ್ - Karavali Times

728x90

7 December 2024

ದಕ್ಷಿಣ ಕನ್ನಡ ಜಿಲ್ಲೆಯ 2 ಸೇತುವೆ ಸಹಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ : ಸಚಿವ ಗುಂಡೂರಾವ್

ಬೆಂಗಳೂರು, ಡಿಸೆಂಬರ್ 07, 2024 (ಕರಾವಳಿ ಟೈಮ್ಸ್) : ವಿಧಾನಸೌಧದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಆರೋಗ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಮಂಗಳೂರು-ಚೆರ್ವತ್ತೂರು ಕರಾವಳಿ ಜಿಲ್ಲಾ ಮುಖ್ಯ ರಸ್ತೆಯ (ಕೋಟೆಪುರದಿಂದ ಬೋಳಾವರೆಗೆ) ನೇತ್ರಾವತಿ ನದಿಗೆ ಅಡ್ಡಲಾಗಿ 200 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪನಡು ಮತ್ತು ತುಂಬೆ ಗ್ರಾಮದ ಮಧ್ಯೆ ನೇತ್ರಾವತಿ ನದಿಗೆ ಅಡ್ಡಲಾಗಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ 

2024-25ನೇ ಸಾಲಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ಎನ್‍ಎಫ್‍ಡಿಎಸ್ ಕಾರ್ಯಕ್ರಮದ ಅಡಿಯಲ್ಲಿ 19.70 ಕೋಟಿ ರೂಪಾಯಿ ವೆಚ್ಚದಲ್ಲಿ ಆರೋಗ್ಯ ಪ್ರಯೋಗ ಶಾಲೆಗಳ ಪರಿಕರಗಳ ಖರೀದಿಗೆ ಅನುಮೋದನೆ ದೊರೆತಿದೆ. 

ರಾಜ್ಯದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎರಡು ಇಲಾಖೆಗಳನ್ನು ವಿಲೀನಗೊಳಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್ ಡಿ ಎ) ಎಂದು ಕರೆಯಲಾಗುವುದು. ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳ ಅಪರೂಪದ ಮತ್ತು ಹೆಚ್ಚಿನ ವೆಚ್ಚದ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು 47 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಪಸ್ ನಿಧಿ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯ 2 ಸೇತುವೆ ಸಹಿತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಿಸಿ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ : ಸಚಿವ ಗುಂಡೂರಾವ್ Rating: 5 Reviewed By: karavali Times
Scroll to Top