ಮಂಗಳೂರು, ಡಿಸೆಂಬರ್ 27, 2024 (ಕರಾವಳಿ ಟೈಮ್ಸ್) : ಡಾ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಜಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಗೌರವಾನ್ವಿತ ನಾಯಕ ಮತ್ತು ಹೆಸರಾಂತ ಅರ್ಥಶಾಸ್ತ್ರಜ್ಞ. ಅವರು ದಣಿವರಿಯಿಲ್ಲದೆ ರಾಷ್ಟ್ರಕ್ಕೆ ಸೇವೆ ಸಲ್ಲಿಸಿದರು ಮತ್ತು ಲಕ್ಷಾಂತರ ಜನರನ್ನು ಮೇಲಕ್ಕೆತ್ತಿದರು. ಭಾರತದ ಬೆಳವಣಿಗೆಗೆ ಅವರ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಸ್ಪೀಕರ್ ಅವರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
0 comments:
Post a Comment