ದೇಶ ಕಂಡ ಮಹಾನ್ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾದ ಭಾರತ : ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಇನ್ನಿಲ್ಲ, ಡಿ 27 ರಿಂದ 7 ದಿನ ದೇಶಾದ್ಯಂತ ಶೋಕಾಚರಣೆ, ರಾಜ್ಯದಲ್ಲಿ ಶುಕ್ರವಾರ ಶಾಲಾ-ಕಾಲೇಜು ಸಹಿತ ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ, ಎಲ್ಲಾ ಸರಕಾರಿ ಕಾರ್ಯಕ್ರಮಗಳು ರದ್ದು, ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಕ್ಯಾನ್ಸಲ್, ಪಿಎಂ, ಸಿಎಂ, ಡಿಸಿಎಂ, ಮಾಜಿ ಪಿಎಂ ಸಹಿತ ಗಣ್ಯರ ಸಂತಾಪ - Karavali Times ದೇಶ ಕಂಡ ಮಹಾನ್ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾದ ಭಾರತ : ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಇನ್ನಿಲ್ಲ, ಡಿ 27 ರಿಂದ 7 ದಿನ ದೇಶಾದ್ಯಂತ ಶೋಕಾಚರಣೆ, ರಾಜ್ಯದಲ್ಲಿ ಶುಕ್ರವಾರ ಶಾಲಾ-ಕಾಲೇಜು ಸಹಿತ ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ, ಎಲ್ಲಾ ಸರಕಾರಿ ಕಾರ್ಯಕ್ರಮಗಳು ರದ್ದು, ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಕ್ಯಾನ್ಸಲ್, ಪಿಎಂ, ಸಿಎಂ, ಡಿಸಿಎಂ, ಮಾಜಿ ಪಿಎಂ ಸಹಿತ ಗಣ್ಯರ ಸಂತಾಪ - Karavali Times

728x90

26 December 2024

ದೇಶ ಕಂಡ ಮಹಾನ್ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾದ ಭಾರತ : ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಇನ್ನಿಲ್ಲ, ಡಿ 27 ರಿಂದ 7 ದಿನ ದೇಶಾದ್ಯಂತ ಶೋಕಾಚರಣೆ, ರಾಜ್ಯದಲ್ಲಿ ಶುಕ್ರವಾರ ಶಾಲಾ-ಕಾಲೇಜು ಸಹಿತ ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ, ಎಲ್ಲಾ ಸರಕಾರಿ ಕಾರ್ಯಕ್ರಮಗಳು ರದ್ದು, ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಕ್ಯಾನ್ಸಲ್, ಪಿಎಂ, ಸಿಎಂ, ಡಿಸಿಎಂ, ಮಾಜಿ ಪಿಎಂ ಸಹಿತ ಗಣ್ಯರ ಸಂತಾಪ

 ಬೆಂಗಳೂರು, ಡಿಸೆಂಬರ್ 27, 2024 (ಕರಾವಳಿ ಟೈಮ್ಸ್): ದೇಶ ಕಂಡ ಮಹಾನ್ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಡಾ  ಮನಮೋಹನ್‌ ಸಿಂಗ್‌ (92) ಗುರುವಾರ (ಡಿ 26)  ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

ವಯೋ ಸಹಜ ಕಾಯಿಲೆ ಹಾಗೂ ತೀವ್ರ ಉಸಿರಾಟದ ತೊಂದರೆಗಾಗಿ ಅವರನ್ನು ಗುರುವಾರ ಸಂಜೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ವೇಳೆ ಅವರು ಮೃತಪಟ್ಟಿದ್ದಾರೆ. 

ಡಾ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಳಗಾವಿಯಿಂದ ದೆಹಲಿಗೆ ವಿಶೇಷ ವಿಮಾನದಲ್ಲಿ ತೆರಳಿದ್ದಾರೆ.

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಡಾ ಮನಮೋಹನ್ ಸಿಂಗ್ ಅವರು ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. ಸಿಂಗ್ ಅವರು ಮೇ 22, 2004 ರಂದು ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು ಮತ್ತು 2009ರಲ್ಲಿ ಅದೇ ದಿನಾಂಕದಂದು ಮತ್ತೊಮ್ಮೆ ಪ್ರಧಾನಿಯಾಗಿ 2ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದರು.

ಸಿಂಗ್ ಅವರ ರಾಜಕೀಯ ಜೀವನ 1991ರಲ್ಲಿ ರಾಜ್ಯಸಭೆಗೆ ಪ್ರವೇಶಿಸುವ ಮೂಲಕ ಆರಂಭ ಆಯಿತು. ಕೇವಲ ನಾಲ್ಕು ತಿಂಗಳ ನಂತರ, ಅಂದಿನ ಪ್ರಧಾನಿ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಕೇಂದ್ರ ಹಣಕಾಸು ಸಚಿವರಾಗಿ ನೇಮಕಗೊಂಡರು, ಇದು ಭಾರತದ ಆರ್ಥಿಕತೆಯಲ್ಲಿ ಪರಿವರ್ತನೆಗೆ ಕಾರಣವಾಗಿತ್ತು.

1990 ರಲ್ಲಿ ಆರ್ಥಿಕ ಸುಧಾರಣೆಗಳು, ಉದಾರೀಕರಣ ನೀತಿಗಳನ್ನು ಜಾರಿಗೆ ತರುವ ಮೂಲಕ ಭಾರತದ ಅರ್ಥ ವ್ಯವಸ್ಥೆಗೆ ಮನಮೋಹನ್ ಸಿಂಗ್ ಹೊಸ ದಿಕ್ಕು ತೋರಿಸಿದ್ದರು. 

6 ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಸಿಂಗ್, ಒಮ್ಮೆಯೂ ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಲಿಲ್ಲ. 1999 ರಲ್ಲಿ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಿಂಗ್, ಬಿಜೆಪಿಯ ವಿಜಯ್ ಕುಮಾರ್ ಮಲ್ಹೋತ್ರ ವಿರುದ್ಧ ಪರಾಭವಗೊಂಡಿದ್ದರು.

ಅಸ್ಸಾಂ ನಿಂದ 5 ಬಾರಿ ಹಾಗೂ ಅಲ್ಪಾವಧಿಗೆ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 1998 ರಿಂದ 2004 ರವರೆಗೆ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಹೊಂದಿದ್ದರು.

1932 ರ ಸೆ 26 ರಂದು ಅಂದಿನ ಅವಿಭಜಿತ ಭಾರತದಲ್ಲಿ ಜನಿಸಿದ ಡಾ. ಮನಮೋಹನ್ ಸಿಂಗ್, 1972 ರಲ್ಲಿ ಹಣಕಾಸು ಸಚಿವಾಲಯದಲ್ಲಿ ಮುಖ್ಯ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಅಷ್ಟೇ ಅಲ್ಲದೇ 1982-1985 ಅವಧಿಯಲ್ಲಿ ಆರ್ ಬಿಐ ಗವರ್ನರ್ ಆಗಿಯೂ ಕಾರ್ಯನಿರ್ವಹಿಸಿದ್ದರು.

ಅಸಾಧಾರಣ ಶೈಕ್ಷಣಿಕ ಹಿನ್ನೆಲೆಯೊಂದಿಗೆ, ಸಿಂಗ್ BA ಮತ್ತು MA ಎರಡರಲ್ಲೂ ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಅಗ್ರಸ್ಥಾನ ಪಡೆದಿದ್ದರು. ಕೇಂಬ್ರಿಡ್ಜ್‌ನಲ್ಲಿ ಹೆಚ್ಚಿನ ಅಧ್ಯಯನವನ್ನು ಪಡೆದ ಅವರು, ಆಕ್ಸ್‌ಫರ್ಡ್‌ನಿಂದ ಡಾಕ್ಟರೇಟ್ ಪದವಿ ಗಳಿಸಿದರು. ಹಣಕಾಸು ಸಚಿವರಾಗಿ, ಅವರು ಭಾರತವನ್ನು ಖಾಸಗೀಕರಣ, ಉದಾರೀಕರಣ ಮತ್ತು ಜಾಗತೀಕರಣದತ್ತ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಡಾ. ಮನಮೋಹನ್ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಪ್ರಧಾನಿ ಎಚ್ ಡಿ‌ ದೇವೇಗೌಡ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಡಾ ಸಿಂಗ್ ನಿಧನರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ  ಡಿಸೆಂಬರ್ 27 ರಂದು ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಿದ್ದು, ಶಾಲಾ-ಕಾಲೇಜುಗಳು, ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವುದಿಲ್ಲ. ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.  ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇನ್ನು ಕೇಂದ್ರ ಸರ್ಕಾರ ಕೂಡ,  ನಾಳೆ ನಡೆಯಲಿರುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗುವುದು ಎಂದಿದೆ. 7 ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಿಸಲಾಗುವುದು. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಡಾ. ಮನಮೋಹನ್ ಸಿಂಗ್ ಅವರಿಗೆ ಸಂಪೂರ್ಣ ರಾಜ್ಯ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ದೇಶ ಕಂಡ ಮಹಾನ್ ಆರ್ಥಿಕ ತಜ್ಞನನ್ನು ಕಳೆದುಕೊಂಡು ಬಡವಾದ ಭಾರತ : ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಇನ್ನಿಲ್ಲ, ಡಿ 27 ರಿಂದ 7 ದಿನ ದೇಶಾದ್ಯಂತ ಶೋಕಾಚರಣೆ, ರಾಜ್ಯದಲ್ಲಿ ಶುಕ್ರವಾರ ಶಾಲಾ-ಕಾಲೇಜು ಸಹಿತ ಸರಕಾರಿ ಕಚೇರಿಗಳಿಗೆ ರಜೆ ಘೋಷಣೆ, ಎಲ್ಲಾ ಸರಕಾರಿ ಕಾರ್ಯಕ್ರಮಗಳು ರದ್ದು, ಬೆಳಗಾವಿಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಕ್ಯಾನ್ಸಲ್, ಪಿಎಂ, ಸಿಎಂ, ಡಿಸಿಎಂ, ಮಾಜಿ ಪಿಎಂ ಸಹಿತ ಗಣ್ಯರ ಸಂತಾಪ Rating: 5 Reviewed By: lk
Scroll to Top