ಮಂಗಳೂರು, ಡಿಸೆಂಬರ್ 02, 2024 (ಕರಾವಳಿ ಟೈಮ್ಸ್) : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಅವಾಂತರ ಸೃಷ್ಟಿಸಿ ಹಾಕಿದ್ದು, ಪರಿಣಾಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಸೆಂಬರ್ 2-3 ರಂದು ಮಿಂಚು-ಸಿಡಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಇಲಾಖಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಮಳೆ ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ವಹಿಸಲು ಹಾಗೂ ಜನರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಿದ್ದಾರೆ. ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರ ಸೇರಿದಂತೆ ನೀರಿನ ಮೂಲ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಸಲಾಗಿದೆ. ಮೀನುಗಾರರು ಮೀನುಗಾರಿಕೆ ತೆರಳದಂತೆ ಹಾಗೂ ತೆರಳಿದ ಮೀನುಗಾರರ ತಕ್ಷಣ ದಡ ಸೇರುವಂತೆ ತಿಳಿಸಲಾಗಿದೆ. ಮಳೆ ಹಾನಿ ಅಥವಾ ಪ್ರಾಕೃತಿಕ ವಿಕೋಪ ಪರಿಸ್ಥಿತಿಗಳಿದ್ದಲ್ಲಿ ಸಾರ್ವಜನಿಕರು ಕಂಟ್ರೋಲ್ ರೂಂ ಸಂಖ್ಯೆ 1077 ಅಥವಾ 0824-2442590 ನ್ನು ಸಂಪರ್ಕಿಸುವಂತೆ ಡೀಸಿ ಆದೇಶದಲ್ಲಿ ತಿಳಿಸಿದ್ದಾರೆ.
0 comments:
Post a Comment