ಬಂಟ್ವಾಳ, ಡಿಸೆಂಬರ್ 06, 2024 (ಕರಾವಳಿ ಟೈಮ್ಸ್) : ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದಾಗಿ ಗಡಿಯಾರ ಮಸೀದಿ ಹಾಗೂ ಸ್ಥಳೀಯವಾಗಿ ತೀವ್ರ ಸಮಸ್ಯೆ ಉಂಟಾಗಿರುವ ಹಿನ್ನಲೆಯಲ್ಲಿ ಸ್ಥಳಕ್ಕಾಗಮಿಸಿದ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ಗಡಿಯಾರ ಜುಮಾ ಮಸೀದಿ ಅಧ್ಯಕ್ಷ ರಿಯಾಝ್ ಕಲ್ಲಾಜೆ ಮನವಿ ಸಲ್ಲಿಸಿದರು.
ಪ್ರಸ್ತುತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಮಸೀದಿಗೆ ಹಾಗೂ ಗಡಿಯಾರದಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲತೆಯ ಬಗ್ಗೆ ಅವರು ಶಾಸಕರಿಗೆ ಪೂರ್ಣವಾದ ಮಾಹಿತಿ ನೀಡಿದರು.
ಸ್ಥಳ ಪರಿಶೀಲನೆ ನಡೆಸಿದ ಶಾಸಕರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ತ್ವರಿತವಾಗಿ ಕಾಮಗಾರಿ ಮುಗಿಸುವಂತೆ ಸೂಚಿಸಿದರು.
0 comments:
Post a Comment