ಬಂಟ್ವಾಳ, ಡಿಸೆಂಬರ್ 18, 2024 (ಕರಾವಳಿ ಟೈಮ್ಸ್) : ಅಕ್ರಮ ಜುಗಾರಿ ಆಟ ನಡೆಯುತ್ತಿದ್ದ ಮನೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು 33 ಮಂದಿ ಆರೋಪಿಗಳನ್ನು ದಸ್ತಗಿರಿ ಮಾಡಿ ಲಕ್ಷಾಂತರ ರೂಪಾಯಿ ನಗದು ಸಹಿತ ಇತರ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ಬಡಗಬೆಳ್ಳೂರು ಎಂಬಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಇಲ್ಲಿನ ನಿವಾಸಿ ನಿಶಾಂತ್ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದಾಗ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ ಬಿ ನೇತೃತ್ವದ ಪೊಲೀಸರು ಈ ದಾಳಿ ಸಂಘಟಿಸಿದ್ದಾರೆ. ದಾಳಿ ವೇಳೆ ಜುಗಾರಿ ಆಟ ಆಡಿಸುತ್ತಿದ್ದ ಆರೋಪಿ ನಿಶಾಂತ್ ತಪ್ಪಿಸಿಕೊಂಡಿದ್ದು, ಆಟದಲ್ಲಿ ನಿರತರಾಗಿದ್ದ ಒಟ್ಟು 33 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಜುಗಾರಿ ಆಟಕ್ಕೆ ಬಳಸಿದ ನಗದು 7,81,420/- ರೂಪಾಯಿ ನಗದು ಸಹಿತ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಸ್ವಾಧೀನಪಡಿಸಿದ ಸ್ವತ್ತುಗಳ ಒಟ್ಟು ಮೌಲ್ಯ 7,90,220/- ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment