ಬಂಟ್ವಾಳ, ಡಿಸೆಂಬರ್ 18, 2024 (ಕರಾವಳಿ ಟೈಮ್ಸ್) : ಮಂಚಿ-ಕೊಳ್ನಾಡು ಸರಕಾರಿ ಶಾಲೆಯಲ್ಲಿ ಜನವರಿ 4 ಹಾಗೂ 5 ರಂದು ನಡೆಯಲಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಮುಳಿಯ ಶಂಕರ ಭಟ್ಟ ಅವರನ್ನು ಸಮ್ಮೇಳನ ಸ್ವಾಗತ ಸಮಿತಿಯ ಪದಾಧಿಕಾರಿಗಳು ಅವರ ಸ್ವಗೃಹದಲ್ಲಿ ಭೇಟಿಯಾಗಿ ಆಹ್ವಾನ ಪತ್ರ ನೀಡಿ ಅಧಿಕೃತ ಗೌರವಪೂರ್ವಕ ಆಮಂತ್ರಿಸಿದರು.
ಈ ಸಂದರ್ಭ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಪರಿಷತ್ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕ ರಾಮಪ್ರಸಾದ್ ರೈ ತಿರುವಾಜೆ, ಕಸಾಪ ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಪಿ ಮಹಮ್ಮದ್, ದಿನೇಶ್ ಶೆಟ್ಟಿ ಅಳಿಕೆ ಉಪಸ್ಥಿತರಿದ್ದರು.
0 comments:
Post a Comment