ಬಂಟ್ವಾಳ, ಡಿಸೆಂಬರ್ 05, 2024 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಪದಾಧಿಕಾರಿಗಳ ಸಭೆ ಡಿಸೆಂಬರ್ 8 ರಂದು ಭಾನುವಾರ ಸಂಜೆ 3 ಗಂಟೆಗೆ ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಇದೇ ವೇಳೆ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆಯೂ ನಡೆಯಲಿದೆ.
ಸಮ್ಮೇಳನದ ಯಶಸ್ವಿಗೆ ಸೂಕ್ತ ಸಲಹೆ, ಮಾರ್ಗದರ್ಶನದೊಂದಿಗೆ ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು. ಸ್ವಾಗತ ಸಮಿತಿಯ ಅಂತಿಮ ಸಭೆ ಇದಾಗಿರುವ ಹಿನ್ನಲೆಯಲ್ಲಿ ಸ್ವಾಗತ ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರು ಕಡ್ಡಾಯವಾಗಿ ಹಾಜರಿದ್ದು, ಸಲಹೆ ಸೂಚನೆಗಳನ್ನು ನೀಡಿ ಸಹಕರಿಸುವಂತೆ ಸಮ್ಮೇಳನ ಸ್ವಾಗತಿ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ, ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ ಹಾಗೂ ಪ್ರಧಾನ ಸಂಚಾಲಕ ರಾಮ್ ಪ್ರಸಾದ್ ರೈ ತಿರುವಾಜೆ ಅವರು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment