ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ನಡೆಯುವ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ - Karavali Times ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ನಡೆಯುವ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ - Karavali Times

728x90

9 December 2024

ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ನಡೆಯುವ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ

ಬಂಟ್ವಾಳ, ಡಿಸೆಂಬರ್ 09, 2024 (ಕರಾವಳಿ ಟೈಮ್ಸ್) : ತಾಲೂಕಿನ ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಜನವರಿ 4 ಹಾಗೂ 5 ರಂದು ನಡೆಯುವ 23ನೇ ಬಂಟ್ವಾಳ ತಾಲುಕು ಕನ್ನಡ ಸಾಹಿತ್ಯ ಸಮ್ಮೇಳನದ  ಆಮಂತ್ರಣ ಪತ್ರಿಕೆ ಭಾನುವಾರ ಶಾಲೆಯಲ್ಲಿ ನಡೆದ ಸ್ವಾಗತ ಸಮಿತಿ ಸಭೆಯಲ್ಲಿ ಬಿಡುಗಡೆಗೊಳಿಸಲಾಯಿತು.

ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ  ಮಾತನಾಡಿ, ಹಿರಿಯ ಸಾಹಿತಿಗಳ, ಪ್ರತಿಭಾನ್ವಿತ ಯುವ ಬರಹಗಾರರ, ಸಾಹಿತ್ಯ ಪ್ರಿಯರೆಲ್ಲರ ಸಾಹಿತ್ಯ ಜಾತ್ರೆಯಾಗಿ 23ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೆರುಗು ನೀಡಲಿದ್ದು, ಕನ್ನಡ ಭಾಷೆಯ ಕೃಷಿಗೆ ಇನ್ನಷ್ಟು ಹೊಸ ರೂಪ ಹೊಸ ಚಿಂತನೆಗಳನ್ನು ಹುಟ್ಟು ಹಾಕುವ ‘ಸಾಹಿತ್ಯದಿಂದ ಸಾಮರಸ್ಯ’ ಎನ್ನುವ ಆಶಯದಡಿ ಈ ಸಮ್ಮೇಳನ ನಡೆಯಲಿದೆ ಎಂದರು. 

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಸತೀಶ್ ಆಳ್ವ ಇರಾ ಬಾಳಿಕೆ ಮಾತನಾಡಿ, ಗ್ರಾಮಾಂತರ ಮಂಚಿ ಪ್ರದೇಶವು ಹಲವಾರು ಸಾಹಿತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದೆ. ಮಂಚಿಯ ಇಬ್ಬರು ಸಾಹಿತಿಗಳು ಈಗಾಗಲೇ  ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆಯನ್ನು ವಹಿಸಿಕೊಂಡಿರುವುದು ಆಯೋಜನೆ ಮಾಡುತ್ತಿರುವ ನಮಗೆ ಹೆಮ್ಮೆಯ ಸಂಗತಿ. ಮಂಚಿ-ಕೊಳ್ನಾಡು ಪ್ರೌಢಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಈ ಬಾರಿಯ ಸಮ್ಮೇಳನ ಯಶಸ್ವಿಯಾಗಿ ಮೂಡಿ ಬರಲಿ ಎಂದು ಹಾರೈಸಿದರು. 

ಹಿರಿಯ ಸಾಹಿತಿ ಹಾಗೂ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪಡಾರು ಮಹಾಬಲೇಶ್ವರ ಭಟ್ ಶುಭ ಹಾರೈಸಿದರು. ಶಾಲಾ ಹಿರಿಯ ವಿದ್ಯಾರ್ಥಿ ಮಾಧವ ಮಾವೆ, ಅಬ್ದುಲ್ ರಝಾಕ್ ಅನಿಸಿಕೆ ವ್ಯಕ್ತಪಡಿಸಿದರು. 

ಬಂಟ್ವಾಳ ತಾಲೂಕು ಘಟಕದ ಪದಾಧಿಕಾರಿಗಳಾದ ವಿ ಸು ಭಟ್, ಅಬೂಬಕ್ಕರ್ ಅಮ್ಮುಂಜೆ, ಮಹಮ್ಮದ್ ಪಾಣೆಮಂಗಳೂರು, ಗಣೇಶ ಪ್ರಸಾದ ಪಾಂಡೆಲು, ಸಮಿತಿ ಕೋಶಾಧಿಕಾರಿ ಹಾಜಿ ಸುಲೈಮಾನ್ ಸುರಿಬೈಲು, ಸಂಚಾಲಕರಾದ ಉಮಾನಾಥ ರೈ ಮೇರಾವು, ಬಿ ಎಂ ಅಬ್ಬಾಸ್ ಆಲಿ, ಪುಷ್ಪರಾಜ ಕುಕ್ಕಾಜೆ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಸುಶೀಲ ವಿಟ್ಲ ಮೊದಲಾದವರು ಭಾಗವಹಿಸಿದ್ದರು. 

ಸ್ವಾಗತ ಸಮಿತಿಯ ಪ್ರಧಾನ ಸಂಯೋಜಕ ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ ವಂದಿಸಿದರು. ಬಂಟ್ವಾಳ ತಾಲೂಕು ಘಟಕದ ಗೌರವ ಕಾರ್ಯದರ್ಶಿ ರಮಾನಂದ  ನೂಜಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ನಡೆಯುವ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯ ಬಿಡುಗಡೆ Rating: 5 Reviewed By: karavali Times
Scroll to Top