ಬಿ.ಸಿ.ರೋಡು : ಕರಾವಳಿ ಕಲೋತ್ಸವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ - Karavali Times ಬಿ.ಸಿ.ರೋಡು : ಕರಾವಳಿ ಕಲೋತ್ಸವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ - Karavali Times

728x90

20 December 2024

ಬಿ.ಸಿ.ರೋಡು : ಕರಾವಳಿ ಕಲೋತ್ಸವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ

ಬಂಟ್ವಾಳ, ಡಿಸೆಂಬರ್ 20, 2024 (ಕರಾವಳಿ ಟೈಮ್ಸ್) : ಕರ್ನಾಟಕ ಸರಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ, ಚಿಣ್ಣರ ಲೋಕ ಸೇವಾಬಂಧು (ರಿ) ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 20 ರಿಂದ ಜನವರಿ 26 ವರೆಗೆ ಬಿ ಸಿ ರೋಡಿನ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ ನಡೆಯುವ ಕರಾವಳಿ ಕಲೋತ್ಸವ 2024-25 ಮತ್ತು ಬಹುಸಂಸ್ಕøತಿ ಸಂಭ್ರಮಕ್ಕೆ ಶುಕ್ರವಾರ ಸಂಜೆ ಚಾಲನೆ ದೊರೆತಿದೆ. 

ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಪಾಲುದಾರ, ಉದ್ಯಮಿ ಜಗನ್ನಾಥ ಚೌಟ ಬದಿಗುಡ್ಡೆ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಚಿಣ್ಣರ ಅಧ್ಯಕ್ಷೆ ಕು ದಿಯಾ ರಾವ್ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿಷಿ ಅನಿಲ್ ಪಂಡಿತ್, ದ ಕ ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ವರ್ಕಿಂಗ್ ಕಾರ್ಯದರ್ಶಿ ಕೆ ಪಿ ಉಮ್ಮರ್ ಮುಸ್ಲಿಯಾರ್ ಪಾಂಡವರಕಲ್ಲು ಶುಭ ಹಾರೈಸಿದರು. 

ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ, ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್, ಗೌರವಾಧ್ಯಕ್ಷ ನ್ಯಾಯವಾದಿ ಜಯರಾಮ ರೈ, ಗೌರವ ಸಲಹೆಗಾರ ಅಶೋಕ್ ಶೆಟ್ಟಿ ಸರಪಾಡಿ, ಶ್ರೀಮತಿ ಪ್ರಣಿತಾ ಉದಯ ಚೌಟ ವೇದಿಕೆಯಲ್ಲಿದ್ದರು. 

ಇದೇ ವೇಳೆ ಚಿತ್ರಕಲಾವಿದ, ಬಹುಮುಖ ಪ್ರತಿಭೆ ಮಾ ಆಶಿಕ್ ಎಂ ರಾವ್ ಮಂಗಳೂರು ಅವರಿಗೆ ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಹಾಗೂ ಅಂತರಾಷ್ಟ್ರೀಯ ಕ್ರೀಡಾಪಟು ಸಚಿನ್ ಸುವರ್ಣ ಅವರಿಗೆ ಉದಯ ಚೌಟ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅನಾರೋಗ್ಯದಿಂದ ಬಳಲುತ್ತಿದ್ದ ತಾಲೂಕಿನ ಎರಡು ಕುಟುಂಬಗಳಿಗೆ ಆರ್ಥಿಕ ಸಹಾಯ ನೀಡಲಾಯಿತು. 

ಇದಕ್ಕೂ ಮುನ್ನ ಬಿ ಸಿ ರೋಡಿನ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂಟಪದಿಂದ ಜಾನಪದ ದಿಬ್ಬಣದ ಮೆರವಣಿಗೆ ಬಿ ಸಿ ರೋಡು ರಾಜಮಾರ್ಗವಾಗಿ ಸಾಗಿ ಬಂದು ಸಭಾಂಗಣಕ್ಕೆ ಬರಲಾಯಿತು. ಮೊಡಂಕಾಪು ಇನ್ಪೆಂಟ್ ಜೀಸಸ್ ಚರ್ಚ್ ಧರ್ಮಗುರು ಫಾದರ್ ವಲೇರಿಯನ್ ಡಿಸೋಜ, ಜಿಲ್ಲಾ ಮದ್ರಸ ಮ್ಯಾನೇಜ್ ಮೆಂಟ್ ವರ್ಕಿಂಗ್ ಕಾರ್ಯದರ್ಶಿ ಕೆ ಪಿ ಉಮ್ಮರ್ ಮುಸ್ಲಿಯಾರ್ ಪಾಂಡವರಕಲ್ಲು ಹಾಗೂ ಅನ್ನಪೂರ್ಣೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಈಶ್ಚರ ಭಟ್ ಮಾದಕಟ್ಟೆ ಅವರುಗಳು ಜಂಟಿಯಾಗಿ ದಿಬ್ಬಣಕ್ಕೆ ಚಾಲನೆ ನೀಡಿದರು. 

ಸುಮಾರು 250 ಮಂದಿ ವಿವಿಧ ಕ್ಷೇತ್ರಗಳ ಕಲಾವಿದರ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಜಾನಪದ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ಸ್ವಾಗತ ಸಮಿತಿ ಅಧ್ಯಕ್ಷ ತಾರಾನಾಥ ಕೊಟ್ಟಾರಿ ಸ್ವಾಗತಿಸಿ, ಪ್ರಧಾನ ಸಂಚಾಲಕ ಮೋಹನ್ ದಾಸ ಕೊಟ್ಟಾರಿ ಪ್ರಸ್ತಾವನೆಗೈದರು. ಕಾರ್ಯಕಾರಿ ಸಮಿತಿ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು ವಂದಿಸಿದರು. ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು : ಕರಾವಳಿ ಕಲೋತ್ಸವ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಚಾಲನೆ Rating: 5 Reviewed By: karavali Times
Scroll to Top