ಡಿಸೆಂಬರ್ 20 ರಿಂದ ಜನವರಿ 26ರವರೆಗೆ ಬಿ.ಸಿ.ರೋಡಿನಲ್ಲಿ ಕರಾವಳಿ ಕಲೋತ್ಸವ : ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಸ್ತು ಪ್ರದರ್ಶನ - Karavali Times ಡಿಸೆಂಬರ್ 20 ರಿಂದ ಜನವರಿ 26ರವರೆಗೆ ಬಿ.ಸಿ.ರೋಡಿನಲ್ಲಿ ಕರಾವಳಿ ಕಲೋತ್ಸವ : ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಸ್ತು ಪ್ರದರ್ಶನ - Karavali Times

728x90

18 December 2024

ಡಿಸೆಂಬರ್ 20 ರಿಂದ ಜನವರಿ 26ರವರೆಗೆ ಬಿ.ಸಿ.ರೋಡಿನಲ್ಲಿ ಕರಾವಳಿ ಕಲೋತ್ಸವ : ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಸ್ತು ಪ್ರದರ್ಶನ

ಬಂಟ್ವಾಳ, ಡಿಸೆಂಬರ್ 18, 2024 (ಕರಾವಳಿ ಟೈಮ್ಸ್) : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ ಬಂಟ್ವಾಳ, ಚಿಣ್ಣರ ಲೋಕ ಸೇವಾ ಬಂಧು ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 20 ರಿಂದ ಜನವರಿ 26ವರೆಗೆ ಬಿ ಸಿ ರೋಡು ಮುಖ್ಯ ವೃತ್ತದ ಬಳಿ ಇರುವ ಗೋಲ್ಡನ್ ಪಾರ್ಕ್ ಅಸೋಸಿಯೇಟ್ಸ್ ಮೈದಾನದಲ್ಲಿ ಕರಾವಳಿ ಕಲೋತ್ಸವ 2024-25 ಮತ್ತು ಬಹುಸಂಸ್ಕ್ರತಿ ಹಾಗೂ ಸುವರ್ಣ ಕರ್ನಾಟಕ ಸಂಭ್ರಮ ಕಾರ್ಯಕ್ರಮಗಳು ನಡೆಯಲಿದೆ ಎಂದು ಕರಾವಳಿ ಕಲೋತ್ಸವ ಅಧ್ಯಕ್ಷ ಸುದರ್ಶನ ಜೈನ್ ತಿಳಿಸಿದ್ದಾರೆ.

ಮಂಗಳವಾರ ಬಿ ಸಿ ರೋಡಿನಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಗೋಲ್ಡನ್ ಪಾರ್ಕ್ ಮೈದಾನದ ಕೀರ್ತಿಶೇಷ ಶ್ರೀ ರಘು ಸಪಲ್ಯ ಮೊಗರ್ನಾಡು ಕಲಾ ವೇದಿಕೆ, ದಿವಂಗತ ಫಾರೂಕ್ ಗೂಡಿನಬಳಿ ಸಭಾಂಗಣದಲ್ಲಿ ಮಕ್ಕಳ ಚಿಣ್ಣರೋತ್ಸವ, ನಾಟಕೋತ್ಸವ, ರಾಜ್ಯ ಮಟ್ಟದ ಫಿಲ್ಮ್ ಡ್ಯಾನ್ಸ್ ಸ್ಪರ್ಧೆ, ಜಿಲ್ಲಾ ಮಟ್ಟದ ಸಿಂಗಾರಿ ಮೇಳ (ಚೆಂಡೆ) ಸ್ಪರ್ಧೆ, ಜಾನಪದ ನೃತ್ಯ, ಭರತನಾಟ್ಯ. ಯಕ್ಷಗಾನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು ಎಂದರು.

ಡಿಸೆಂಬರ್ 20ರಂದು ಸಂಜೆ 5 ಗಂಟೆಗೆ ಬಿ ಸಿ ರೋಡಿನ ಶ್ರೀ ಅನ್ನಪೂರ್ಣೇಶ್ವರಿ ಕಲಾ ಮಂಟಪದಿಂದ ಜಾನಪದ ದಿಬ್ಬಣದ ಮೆರವಣಿಗೆಯು ಸುಮಾರು 250 ಮಂದಿ ಕಲಾವಿದರ ಜೊತೆ ರಾಜ್ಯ ಹಾಗೂ ಹೊರ ರಾಜ್ಯದ ಜಾನಪದ ತಂಡಗಳೊಂದಿಗೆ, ವೈವಿಧ್ಯಮಯ ಕಾರ್ಯಕ್ರಮಗಳ ಪ್ರಸ್ತುತಿಯೊಂದಿಗೆ ಬಿ ಸಿ ರೋಡಿನ ಗೋಲ್ಡನ್ ಪಾರ್ಕ್ ಮೈದಾನದ ಕೀರ್ತಿಶೇಷ ಶ್ರೀ ರಘು ಸಪಲ್ಯ ಮೊಗರ್ನಾಡು ಕಲಾ ವೇದಿಕೆ, ದಿವಂಗತ ಫಾರೂಕ್ ಗೂಡಿನ ಬಳಿ ಸಭಾಂಗಣದತ್ತ ಸಾಗಿ ಬರಲಿದೆ.

ಸಂಜೆ ಗಂಟೆ 6.30 ಕ್ಕೆ ಕರಾವಳಿ ಕಲೋತ್ಸವ ಉದ್ಘಾಟನೆ, ಕೀರ್ತಿಶೇಷ ಶ್ರೀ ರಘು ಸಪಲ್ಯ ಮೊಗರ್ನಾಡು ಕಲಾ ವೇದಿಕೆ ದಿವಂಗತ ಫಾರೂಕ್ ಗೂಡಿನಬಳಿ ಸಭಾಂಗಣ ಉದ್ಘಾಟನೆ, ಅಮ್ಯೂಸ್‍ಮೆಂಟ್ ಪಾರ್ಕ್ ಉದ್ಘಾಟನೆ ಹಾಗೂ ವಿವಿಧ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಉದಯ ಚೌಟ ಸಾಧನ ಪ್ರಶಸ್ತಿ ಪ್ರದಾನ, ಚಿಣ್ಣರ ಸೌರಭ ರಾಜ್ಯ ಪ್ರಶಸ್ತಿ ಪ್ರದಾನ, ಅನಾರೋಗ್ಯ ಪೀಡಿತರಿಗೆ ವೈದ್ಯಕೀಯ ನೆರವು ಬಳಿಕ  ರಾತ್ರಿ ಗಂಟೆ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಝೀ ಕನ್ನಡ ಸ ರಿ ಗ ಮ ಪ ಖ್ಯಾತಿಯ ಅಮೀಶ್ ಕುಮಾರ್, ಸಮನ್ವಿ ರೈ, ಅನ್ವಿತ್ ಕೊಡಗು ಮತ್ತು ಚಿಣ್ಣರ ಲೋಕ ಸಂಸ್ಥೆಯ ಬಾಲ ಕಲಾವಿದರಿಂದ “ರಸಮಂಜರಿ” ಮತ್ತು ಮಾ. ಸಾಯಿ ಮನ್ವಿತ್ ಕೊಟ್ಟಾರಿ ಮುನ್ನೂರು ಮತ್ತು ತಂಡ, ನರಿಕೊಂಬು ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ “ಪಿಲಿ ನಲಿಕೆ” ಕಾರ್ಯಕ್ರಮ ನಡೆಯಲಿದೆ ಎಂದ ಅವರು ಡಿ 21 ರಿಂದ ಜನವರಿ 5 ರವರೆಗೆ ಪ್ರತಿದಿನ ಸಭಾ ಕಾರ್ಯಕ್ರಮ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು. 

ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ಜಾನಪದ ದಿಬ್ಬಣ ಉದ್ಘಾಟಿಸಲಿದ್ದು, ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಕೀರ್ತಿಶೇಷ ಶ್ರಿ ರಘು ಸಪಲ್ಯ ಮೊಗರ್ನಾಡು ಕಲಾ ವೇದಿಕೆ ಉದ್ಘಾಟಿಸುವರು. ಸ್ಪೀಕರ್ ಯು ಟಿ ಖಾದರ್ ಅವರು ಕೀರ್ತಿಶೇಷ ಫಾರೂಕ್ ಗೂಡಿನಬಳಿ ಸಭಾಂಗಣವನ್ನು ಉದ್ಘಾಟಿಸುವರು. ಅಮ್ಯೂಸ್ ಮೆಂಟ್ ಪಾರ್ಕನ್ನು ಸಂಸದ ಬ್ರಿಜೇಶ್ ಚೌಟ ಉದ್ಘಾಟಿಸುವರು. ಮಾಜಿ ಸಚಿವ ಬಿ ರಮಾನಾಥ ರೈ ಅವರು ಕರಾವಳಿ ಕಲೋತ್ಸವ ಉದ್ಘಾಟಿಸುವರು. ಶ್ರೀ ಕ್ಷೇತ್ರ ಮಾಣಿಲದ ಶ್ರೀ ಯೋಗಿ ಕೌಸ್ತುಭ ಮೋಹನದಾಸ ಪರಮಹಂಸ ಸ್ವಾಮೀಜಿ ಆಶಿರ್ವಚನಗೈಯುವರು. ಮೊಡಂಕಾಪು ಚರ್ಚ್ ಧರ್ಮಗುರು ಫಾದರ್ ವಲೇರಿಯನ್ ಡಿಸೋಜ, ಕೆ ಪಿ ಉಮರ್ ಮುಸ್ಲಿಯಾರ್ ಪಾಂಡವರಕಲ್ಲು ಹಾಗೂ ಇರ್ಶಾದ್ ಹುಸೈನ್ ದಾರಿಮಿ ಮಿತ್ತಬೈಲು, ತಾಲೂಕು ತಹಶೀಲ್ದಾರ್ ಶ್ರೀಮತಿ ಅರ್ಚನಾ ಭಟ್ ಭಾಗವಹಿಸುವರು. ಚಿಣ್ಣರ ಅಧ್ಯಕ್ಷೆ ಕು ದಿಯಾ ರಾವ್ ಮಂಗಳೂರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ನ್ಯಾಯವಾದಿ ಪಿ ಜಯರಾಮ ರೈ, ಸುದರ್ಶನ್ ಜೈನ್ ಪಂಜಿಕಲ್ಲು, ಜಗನ್ನಾಥ ಚೌಟ ಮಾಣಿ, ಚಂದ್ರಹಾಸ ರೈ ಬಾಲಾಜಿಬೈಲು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ರಾಜೇಶ್, ಶ್ರೀಮತಿ ಪ್ರಣಿತ ಉದಯ ಚೌಟ, ಭುವನೇಶ್ ಪಾಣೆಮಂಗಳೂರು ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು. 

ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್, ಸೇವಾಬಂಧು (ರಿ.) ಇದರ ಸ್ಥಾಪಕ, ಪ್ರಧಾನ ಸಂಚಾಲಕ  ಮೋಹನ್ ದಾಸ ಕೊಟ್ಟಾರಿ ಮಾತನಾಡಿ, ಚಿಣ್ಣರಲೋಕ ನೋಂದಾಯಿತ  ಸಂಸ್ಥೆಯಾಗಿದ್ದು ಕೇವಲ ಬಂಟ್ವಾಳ ತಾಲೂಕಿಗೆ ಮಾತ್ರ ಸೀಮಿತವಾಗದೆ ಜಿಲ್ಲೆಯಾದ್ಯಂತ ಹಲವು ಕಡೆಗಳಲ್ಲಿ ತನ್ನ ಶಾಖೆಯನ್ನು ಹೊಂದಿ ತನ್ನ ಚಟುವಟಿಕೆಗಳನ್ನು ಅವ್ಯಾಹತವಾಗಿ ನಡೆಸಿಕೊಂಡು ಬಂದಿದೆ. ನುರಿತ ವಿಷಯ ಪರಿಣತದಿಂದ ಈ ಕ್ಷೇತ್ರಗಳಲ್ಲಿ ಎಳೆಯ ಮಕ್ಕಳಿಗೆ ತರಬೇತಿ ನೀಡುತ್ತಾ ಬರುತ್ತಿದೆ. ಇದೀಗ ಈ ಸಂಸ್ಥೆ ತನ್ನ ಕಾರ್ಯಕ್ಷೇತ್ರದ ಸಾಧನೆಯನ್ನು ಸಮುದಾಯಕ್ಕೆ ಮನವರಿಕೆ ಮಾಡಿಕೊಡಬೇಕು. ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆಯನ್ನು ಒದಗಿಸಿಕೊಡಬೇಕು. ಎಳೆಯರ ಮುಂದಾಳುತನಕ್ಕೆ ಹಿರಿಯರು ಸಹಕರಿಸಿ ಎಳೆಯರಿಂದ ಒಂದು ಸುಂದರ ಕಾರ್ಯಕ್ರಮ ಜರುಗಿಸಿ ಅವರಿಗೆ ಹೊಸ ಮಕ್ಕಳ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ, ಸ್ಫೂರ್ತಿ ತುಂಬಬೇಕು ಎಂಬ ಸದುದ್ದೇಶದಿಂದ ಕರಾವಳಿ ಕಲೋತ್ಸವ ಕಾರ್ಯಕ್ರಮ ಪ್ರತಿ ವರ್ಷವೂ ಮಾಡುತ್ತಿದೆ ಎಂದು ಸಂಸ್ಥೆಯ ಸುದೀರ್ಘ ಕಾಲ ಸೇವೆ ಹಾಗೂ ನಡೆದು ಬಂದ ಹಾದಿಯ ಬಗ್ಗೆ ಮಾಹಿತಿ ನೀಡಿದರು. 

ಸುದ್ದಿಗೋಷ್ಠಿಯಲ್ಲಿ ಕಲೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ತಾರಾನಾಥ ಕೊಟ್ಟಾರಿ, ಉಪಾಧ್ಯಕ್ಷೆ ಪೌಝಿಯಾ, ಗೌರವ ಸಲಹೆಗಾರ ಅಶೋಕ್ ಶೆಟ್ಟಿ ಸರಪಾಡಿ, ನಿರ್ದೇಶಕರಾದ ಇಬ್ರಾಹಿಂ ಕೈಲಾರ್, ಶಿವಪ್ರಸಾದ್ ಬಂಟ್ವಾಳ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಡಿಸೆಂಬರ್ 20 ರಿಂದ ಜನವರಿ 26ರವರೆಗೆ ಬಿ.ಸಿ.ರೋಡಿನಲ್ಲಿ ಕರಾವಳಿ ಕಲೋತ್ಸವ : ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಸ್ತು ಪ್ರದರ್ಶನ Rating: 5 Reviewed By: karavali Times
Scroll to Top