ಮಂಗಳೂರಿನಿಂದ ಮೂಡಬಿದ್ರೆ ಮೂಲಕ ಕಾರ್ಕಳಕ್ಕೆ ಸರಕಾರಿ ಬಸ್ ಸೇವೆ ಆರಂಭ : ಶಕ್ತಿ ಯೋಜನೆಗೆ ಇನ್ನಷ್ಟು ಬಲ - Karavali Times ಮಂಗಳೂರಿನಿಂದ ಮೂಡಬಿದ್ರೆ ಮೂಲಕ ಕಾರ್ಕಳಕ್ಕೆ ಸರಕಾರಿ ಬಸ್ ಸೇವೆ ಆರಂಭ : ಶಕ್ತಿ ಯೋಜನೆಗೆ ಇನ್ನಷ್ಟು ಬಲ - Karavali Times

728x90

15 December 2024

ಮಂಗಳೂರಿನಿಂದ ಮೂಡಬಿದ್ರೆ ಮೂಲಕ ಕಾರ್ಕಳಕ್ಕೆ ಸರಕಾರಿ ಬಸ್ ಸೇವೆ ಆರಂಭ : ಶಕ್ತಿ ಯೋಜನೆಗೆ ಇನ್ನಷ್ಟು ಬಲ

ಮಂಗಳೂರು, ಡಿಸೆಂಬರ್ 15, 2024 (ಕರಾವಳಿ ಟೈಮ್ಸ್) : ಮಂಗಳೂರಿನಿಂದ ಮೂಡುಬಿದಿರೆ ಮೂಲಕ ಕಾರ್ಕಳಕ್ಕೆ ಆರಂಭವಾಗಿರುವ ಕೆ ಎಸ್ ಆರ್ ಟಿ ಸಿ ಬಸ್ಸಿಗೆ ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಬಳಿ ಶನಿವಾರ ಅಧಿಕೃತ ಹಸಿರು ನಿಶಾನೆ ತೋರಲಾಯಿತು. 

ಈ ವೇಳೆ ಗ್ಯಾರಂಟಿ ಅನುಷ್ಠಾನ ಸಮಿತಿಯಿಯ ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಬಸ್ಸಿನ ಸಿಬ್ಬಂದಿ ಹಾಗೂ ಪ್ರಯಾಣಿಕರಿಗೆ ಶುಭ ಕೋರಿದರು. ಬಳಿಕ ಮಾತನಾಡಿದ ಮಂಗಳೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಕೊಟ್ಟ ಮಾತನ್ನು ಉಳಿಸಿಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಮೂಡುಬಿದಿರೆ- ಕಾರ್ಕಳ ರಸ್ತೆಯಲ್ಲಿ ಸರಕಾರಿ ಬಸ್ ಇಲ್ಲದೆ ಶಕ್ತಿ ಯೋಜನೆ ಜಾರಿಗೆ ತೊಡಕಾಗಿತ್ತು. ಇದೀಗ ಸಾರಿಗೆ ಸಚಿವರು ಮತ್ತು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರ ಪ್ರಯತ್ನದಿಂದ ಈ ಭಾಗಕ್ಕೂ ಸರಕಾರಿ ಬಸ್ ನೀಡಿದ್ದಾರೆ. ಈಗಿರುವ ಬಸ್ಸುಗಳ ಸಂಖ್ಯೆ ಹೆಚ್ಚಿಸಲಾಗುವುದು. ಮಂಗಳೂರಿನ ಧಾರ್ಮಿಕ, ಪ್ರವಾಸಿ ಕೇಂದ್ರಗಳಿಗೂ ಸರಕಾರಿ ಬಸ್ ಆರಂಭಿಸಲು ಪ್ರಯತ್ನಿಸಲಾಗುವುದು ಎಂದರು. 

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ ಆರ್ ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್, ಕಾಪೆರ್Çರೇಟರ್ ನವೀನ್ ಡಿಸೋಜ, ಮಾಜಿ ಕಾಪೆರ್Çರೇಟರ್ ಅಶೋಕ್ ಡಿ ಕೆ, ನೀರಜ್ ಚಂದ್ರಪಾಲ್, ನಝೀರ್ ಬಜಾಲ್, ಟಿ ಕೆ ಸುಧೀರ್, ಶಬ್ಬೀರ್ ಸಿದ್ದಕಟ್ಟೆ, ಎಂ ಪಿ ಮನೋರಾಜ್, ಭಾಸ್ಕರ್ ರಾವ್, ಅಲಿಸ್ಟರ್ ಡಿಕುನ್ಹ, ಶಾಂತಲಾ ಗಟ್ಟಿ, ಸಾರಿಕ ಪೂಜಾರಿ,  ಪ್ರೇಮ್ ಬಲ್ಲಾಳ್‍ಬಾಗ್, ಸತೀಶ್ ಪೆಂಗಲ್, ಇಮ್ರಾನ್ ಎ ಆರ್, ಯೋಗೀಶ್ ನಾಯಕ್ ಮೊದಲಾದವರು ಭಾಗವಹಿಸಿದ್ದರು. 


  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರಿನಿಂದ ಮೂಡಬಿದ್ರೆ ಮೂಲಕ ಕಾರ್ಕಳಕ್ಕೆ ಸರಕಾರಿ ಬಸ್ ಸೇವೆ ಆರಂಭ : ಶಕ್ತಿ ಯೋಜನೆಗೆ ಇನ್ನಷ್ಟು ಬಲ Rating: 5 Reviewed By: karavali Times
Scroll to Top