ಪುತ್ತೂರು, ಡಿಸೆಂಬರ್ 28, 2024 (ಕರಾವಳಿ ಟೈಮ್ಸ್) : ಚಾಲಕನ ನಿಯಂತ್ರಣ ಮೀರಿ ಕಾರೊಂದು ರಸ್ತೆ ಬದಿಯ ಕಮರಿಗೆ ಉರುಳಿ ಬಿದ್ದು ಮೂವರು ದಾರುಣವಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪರ್ಲಡ್ಕ ಬೈಪಾಸ್ ಎಂಬಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ.
ಮೃತರನ್ನು ಸುಳ್ಯ-ಜಟ್ಟಿಪಳ್ಳ ನಿವಾಸಿಗಳಾದ ಕಾರು ಚಾಲಕ ಚಿದಾನಂದ ನಾಯ್ಕ (57), ಅವರ ತಂದೆ ಅಣ್ಣು ನಾಯ್ಕ (86) ಹಾಗೂ ರಮೇಶ ನಾಯ್ಕ (67) ಎಂದು ಹೆಸರಿಸಲಾಗಿದೆ.
ಚಿದಾನಂದ ನಾಯ್ಕ ಅವರು ಕಾರು ಚಾಲಕರಾಗಿ ತಂದೆ ಅಣ್ಣು ನಾಯ್ಕ ಹಾಗೂ ರಮೇಶ್ ನಾಯ್ಕ ಅವರನ್ನು ಕುಳ್ಳಿರಿಸಿಕೊಂಡು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಣಚ ಕಡೆಯಿಂದ ಸುಳ್ಯ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಪುತ್ತೂರು ಕಸ್ಬಾ ಗ್ರಾಮದ ಪರ್ಲಡ್ಕ ಬೈಪಾಸ್ ಎಂಬಲ್ಲಿ ಚಾಲಕನ ನಿಯಂತ್ರಣ ಮೀರಿದ ಕಾರು ರಸ್ತೆ ಬದಿಯ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಕಾರಿನಲ್ಲಿದ್ದ ಮೂವರೂ ಕೂಡಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಜಟ್ಟಿಪಳ್ಳ ನಿವಾಸಿ ದೀಪಕ್ ಅವರು ನೀಡಿದ ದೂರಿನಂತೆ ಪುತ್ತೂರು ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment