ಬಂಟ್ವಾಳ, ಡಿಸೆಂಬರ್ 15, 2024 (ಕರಾವಳಿ ಟೈಮ್ಸ್) : ವಿಜಯಪುರದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಿದ್ದ ನಿನಾದ್ ಕೈರಂಗಳ ಪ್ರಥಮ ಸ್ಥಾನ ಪಡೆದಿದ್ದಾರೆ.
ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ ಶಿರಸಿ ಇವರು ಸಂಯೋಜಿಸಿದ ಶ್ರೀ ಭಗವದ್ಗೀತಾ ಅಭಿಯಾನ ಕರ್ನಾಟಕ-2024 ಕಾರ್ಯಕ್ರಮದಡಿ ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡಿದ್ದಾರೆ.
ಇವರನ್ನು ಶ್ರೀ ಸೋಂದಾಸ್ವರ್ಣವಲ್ಲಿ ಮಹಾ ಸಂಸ್ಥಾನ ಶಿರಸಿಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಪ್ರಾಥಮಿಕ ಶಾಲಾ ವಿಭಾಗದ ‘ಭಗವದ್ಗೀತೆಯಿಂದ ಸಾಮಾಜಿಕ ಸಾಮರಸ್ಯ’ ಎಂಬ ವಿಷಯದಲ್ಲಿ ಭಾಷಣ ಪ್ರಸ್ತುತಪಡಿಸಿದ ನಿನಾದ್ ಅವರು ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ 7ನೇ ತರಗತಿಯ ವಿದ್ಯಾರ್ಥಿ. ಚಿತ್ರಕಲೆ, ಕಥಾ ರಚನೆಗಳಲ್ಲೂ ರಾಜ್ಯ, ಜಿಲ್ಲೆ , ತಾಲೂಕು ಮಟ್ಟದ ಸಾಕಷ್ಟು ಬಹುಮಾನಗಳನ್ನು ಪಡೆದಿರುತ್ತಾರೆ. ಯಕ್ಷಗಾನ, ಕೊಳಲು ವಾದನ ಇವರ ಹವ್ಯಾಸವಾಗಿದ್ದು ಬಹುಮುಖ ಪ್ರತಿಭೆಯ ವಿದ್ಯಾರ್ಥಿಯಾಗಿದ್ದಾರೆ.
0 comments:
Post a Comment