ಉಪ್ಪಿನಂಗಡಿ, ಡಿಸೆಂಬರ್ 04, 2024 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಹೊಸ ಬಸ್ ನಿಲ್ದಾಣದ ಹಿಂಬದಿಯಲ್ಲಿರುವ ನಿರ್ಮಾಣ ಹಂತದ ಗ್ರಂಥಾಲಯ ಕಟ್ಟಡದ ಮೊದಲ ಮಹಡಿಯ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯ ಮೃತದೇಹ ಬುಧವಾರ ಬೆಳಿಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಅಸ್ಸಾಂ ಮೂಲದ ಸುಮಾರು 30-35 ವರ್ಷ ಪ್ರಾಯದ ದೀಪಕ್ ಎಂದು ಗುರುತಿಸಲಾಗಿದೆ. ಮೃತದೇಹದ ಹಣೆ ಮತ್ತು ತಲೆಯಲ್ಲಿ ರಕ್ತದ ಗಾಯಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಗ್ರೇಡ್-1 ಕಾರ್ಯದರ್ಶಿ ಶ್ರೀಮತಿ ಗೀತಾ ಬಿ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment