ಕಡಬ, ಡಿಸೆಂಬರ್ 08, 2024 (ಕರಾವಳಿ ಟೈಮ್ಸ್) : ತಾಲೂಕಿನ ಸವಣೂರು ಗ್ರಾಮದ ಮಾಂತೂರು ಹಾಗೂ ಶಾಂತಿನಗರ ಎಂಬಲ್ಲಿ ಖಚಿತ ಮಾಹಿತಿ ಮೇರೆಗೆ ಶನಿವಾರ ಕಾರ್ಯಾಚರಣೆ ನಡೆಸಿದ ಬೆಳ್ಳಾರೆ ಠಾಣಾ ಪೊಲೀಸರು ಇಬ್ಬರು ಗಾಂಜಾ ಗಿರಾಕಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳನ್ನು ಸವಣೂರು ಗ್ರಾಮದ ನಿವಾಸಿಗಳಾದ ಮಹಮ್ಮದ್ ಫೈಝೀನ್ (34) ಹಾಗೂ ಮಜೀದ್ (35) ಎಂದು ಹೆಸರಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬೆಳ್ಳಾರೆ ಠಾಣಾ ಪಿಎಸೈ ಈರಯ್ಯ ಡಿ ಎನ್ ಅವರ ನೇತೃತ್ವದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
ಬಂಧಿತ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅಮಲು ಪದಾರ್ಥ ಸೇವಿಸಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ಈ ಬಗ್ಗೆ ಬೆಳ್ಳಾರೆ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment