ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಜನರಿಗೆ ಭಯಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸರ ಕರ್ತವ್ಯ, ಪೊಲೀಸರ ಯೋಗಕ್ಷೇಮ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ - Karavali Times ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಜನರಿಗೆ ಭಯಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸರ ಕರ್ತವ್ಯ, ಪೊಲೀಸರ ಯೋಗಕ್ಷೇಮ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ - Karavali Times

728x90

8 January 2025

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಜನರಿಗೆ ಭಯಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸರ ಕರ್ತವ್ಯ, ಪೊಲೀಸರ ಯೋಗಕ್ಷೇಮ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ ಎಂದು ಮುಖ್ಯಮಂತ್ರಿ 


ಬೆಂಗಳೂರು, ಜನವರಿ 08, 2025 (ಕರಾವಳಿ ಟೈಮ್ಸ್) : ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳ ಕರ್ತವ್ಯ. ರಾಜ್ಯದ ಜನಸಂಖ್ಯೆ 7 ಕೋಟಿ ದಾಟಿ ಹೋಗುತ್ತಿದೆ. ಇವರೆಲ್ಲರ ರಕ್ಷಣೆ, ಆಸ್ತಿ ಪಾಸ್ತಿ, ಮಾನ, ಪ್ರಾಣ ರಕ್ಷಿಸಿ ನೆಮ್ಮದಿಯ ಬದುಕಿಗೆ ಸುರಕ್ಷಿತ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೊಲೀಸ್ ಇಲಾಖೆ ಮೇಲಿದೆ. ಇದಕ್ಕಾಗಿ ಇಲಾಖೆಗೆ ಅಗತ್ಯವಾದ ಸವಲತ್ತು ಮತ್ತು ನೂತನ ಠಾಣೆಗಳನ್ನು ಒದಗಿಸಲು ಸರಕಾರ ಸದಾ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. 

ಬೆಂಗಳೂರು ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಠಾಣೆ, ಕಚೇರಿಗಳ ಉದ್ಘಾಟನೆ ಹಾಗೂ ಪೊಲೀಸ್ ವಸತಿ ಸಮುಚ್ಛಯಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಇದ್ದಾಗ ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಹೀಗಾಗಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ರೂಪಿಸಿ ಠಾಣೆಗೆ ಬರುವವರನ್ನು ಆರೋಗ್ಯಕರವಾಗಿ ನಡೆಸಿಕೊಳ್ಳಬೇಕು ಎಂದರು. 

ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗುತ್ತಿರುವುದು ನೆಮ್ಮದಿಯ ಸಂಗತಿ. ಆದರೆ ಪೊಲೀಸರು ಚಾಪೆ ಕೆಳಗೆ ತೂರಿದರೆ ಅಪರಾಧಿಗಳು ರಂಗೋಲಿ ಕೆಳಗೆ ತೂರಿ, ಕಾನೂನಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಾರೆ. ಇದಕ್ಕೆ ಅವಕಾಶ ಆಗಬಾರದು. ಜನರಿಗೆ ಉದ್ಯೋಗ ಇಲ್ಲದಿರುವುದು, ಬದುಕಿಗೆ ಅವಕಾಶ ಇಲ್ಲದಿರುವಾಗ ಅಪರಾಧ ಜಗತ್ತಿನ ಕಡೆಗೆ ಆಕರ್ಷಿತರಾಗುತ್ತಾರೆ. ನಗರದಲ್ಲಿ ರಿಯಲ್ ಎಸ್ಟೇಟ್ ದಂಧೆ ಕಾರಣದಿಂದ ಅಪರಾಧಗಳು ಹೆಚ್ಚಾಗುತ್ತಿವೆ. 

ಪೊಲೀಸರು ರಿಯಲ್ ಎಸ್ಟೇಟ್ ಮಾಫಿಯಾ ಜೊತೆ ಕೈ ಜೋಡಿಸಿದರೆ ಸಹಿಸಲ್ಲ. ಯಾವುದೇ ಕಾರಣಕ್ಕೂ ಅಕ್ರಮ ರಿಯಲ್ ಎಸ್ಟೇಟ್‍ಗೆ ಬೆಂಬಲ ನೀಡಬಾರದು. ಬೆಂಬಲ ಕೊಡುವ ಕೆಲಸ ಮಾಡಿದರೆ ಸರಕಾರ ಸಹಿಸಲ್ಲ ಎಂದು ಸಿಎಂ ಪೇದೆಗಳು, ಪಿಎಸ್ಸೈಗಳು, ಇನ್ಸ್‍ಪೆಕ್ಟರ್‍ಗಳೇ ಹೆಚ್ಚೆಚ್ಚು ಕೆಲಸ ಮಾಡುತ್ತಾರೆ. ಇವರ ಯೋಗಕ್ಷೇಮ ಕೂಡ ನಮ್ಮ ಜವಾಬ್ದಾರಿ. ಪೊಲೀಸ್ ಸಿಬ್ಬಂದಿಯ ಗೃಹ ಯೋಜನೆಯನ್ನು ಸರಕಾರ ಮುಂದುವರೆಸುತ್ತದೆ ಎಂದು ಭರವಸೆ ನೀಡಿದರು. 

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ, ಜನರಿಗೆ ಭಯಮುಕ್ತ ವಾತಾವರಣ ನಿರ್ಮಿಸುವುದು ಪೊಲೀಸರ ಕರ್ತವ್ಯ, ಪೊಲೀಸರ ಯೋಗಕ್ಷೇಮ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top