ಬಂಟ್ವಾಳ, ಜನವರಿ 04, 2025 (ಕರಾವಳಿ ಟೈಮ್ಸ್) : (ದಿವಂಗತ ಗಂಗಾಧರ ರೈ ಬೋಳಂತೂರು ಮುಖ್ಯ ದ್ವಾರ, ದಿವಂಗತ ಕನ್ನಡ ಪಂಡಿತ್ ಎ ಪಿ ತಿಮ್ಮಯನ್ ವೇದಿಕೆ, ದಿವಂಗತ ಕಲ್ಲಾಡಿ ವಿಠಲ ಶೆಟ್ಟಿ ಪ್ರವೇಶ ದ್ವಾರ, ಬಿ ವಿ ಕಾರಂತ ಸಭಾಂಗಣ, ದಿವಂಗತ ನಾರಾಯಣ ಭಟ್, ನೂಜಿಬೈಲು ಪ್ರಾಂಗಣ) : 23ನೇ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಶನಿವಾರ (ಜ 4) ಬೆಳಿಗ್ಗೆ ಸಂಭ್ರಮದ ಚಾಲನೆ ದೊರೆತಿದೆ.
ಹಿರಿಯ ಸಾಹಿತಿ ಎಳೆಯರ ಗೆಳೆಯ ಮುಳಿಯ ಖ್ಯಾತಿಯ ಮುಳಿಯ ಶಂಕರ ಭಟ್ಟ ಅವರ ಸರ್ವಾಧ್ಯಕ್ಷತೆಯಲ್ಲಿ ಎರಡು ದಿನಗಳ ಕಾಲ ನಡೆಯುವ ಸಮ್ಮೇಳನಕ್ಕೆ ಕೊಳ್ನಾಡು ಗ್ರಾ ಪಂ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಅವರು ರಾಷ್ಟ್ರಧ್ವಜಾರೋಹಣಗೈಯುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡಿದರು. ದ ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಪರಿಷತ್ ಧ್ವಜಾರೋಹಣಗೈದರು. ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಕನ್ನಡ ಧ್ವಜಾರೋಹಣಗೈದರು.
ಸಮ್ಮೇಳನದ ಸರ್ವಾಧ್ಯಕ್ಷ ಮುಳಿಯ ಶಂಕರ್ ಭಟ್ಟ, ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ ಇರಾ-ಬಾಳಿಕೆ, ಪ್ರಧಾನ ಸಂಯೋಜಕ ರಾಮಪ್ರಸಾದ್ ರೈ ತಿರುವಾಜೆ, ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಪ್ರಧಾನ ಕಾರ್ಯದರ್ಶಿಗಳಾದ ರಮಾನಂದ ನೂಜಿಪ್ಪಾಡಿ, ಗೌರವ ಕೋಶಾಧಿಕಾರಿ ಡಿ ಬಿ ಅಬ್ದುಲ್ ರಹಿಮಾನ್, ಸಂಚಾಲಕರಾದ ಬಿ ಎಂ ಅಬ್ಬಾಸ್ ಅಲಿ, ಉಮಾನಾಥ ರೈ ಮೇರಾವು, ಉಪಾಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಕೋಶಾಧಿಕಾರಿ ಸುಲೈಮಾನ್ ಜಿ ಸುರಿಬೈಲು, ಗೌರವ ಸಲಹೆಗಾರ ರವೀಂದ್ರ ಕುಕ್ಕಾಜೆ, ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ವಿಟ್ಲ, ಆರ್ಥಿಕ ಸಮಿತಿ ಸಂಚಾಲಕ ನಿಶ್ಚಲ್ ಜಿ ಶೆಟ್ಟಿ ಕಲ್ಲಾಡಿ, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಪಾಣೆಮಂಗಳೂರು ಹೋಬಳಿ ಅಧ್ಯಕ್ಷ ಪಿ ಮುಹಮ್ಮದ್ ಪಾಣೆಮಂಗಳೂರು, ತಾರನಾಥ ಕೈರಂಗಳ, ಹಾರಿಸ್ ಸುರಿಬೈಲು, ಉಮ್ಮರ್ ಕುಂಞÂ ಸಾಲೆತ್ತೂರು ಮೊದಲಾದವರು ಭಾಗವಹಿಸಿದ್ದರು.
ಕನ್ನಡ ಸಾಹಿತ್ಯ ಪರಿಷತ್ತು ಗೌರವ ಪ್ರಧಾನ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಸ್ವಾಗತಿಸಿ, ಶ್ರೀಮತಿ ದೇವಕಿ ಶೆಟ್ಟಿ ಎಚ್ ವಂದಿಸಿದರು. ಕನ್ನಡ ಶಿಕ್ಷಕ ಶಿವಕುಮಾರ್ ಎಂ ಜಿ ಕಾರ್ಯಕ್ರಮ ನಿರೂಪಿಸಿದರು. ನಾಗೇಶ್ ಸಿ ಎಚ್ ನೂಜಿ ಅವರು ಧ್ವಜರೋಹಣ ಕಾರ್ಯಕ್ರಮ ನಿರ್ವಹಿಸಿದರು.
ಶನಿವಾರ ಅಪರಾಹ್ನ 3 ಗಂಟೆಗೆ ಕನ್ನಡ ಭುವನೇಶ್ವರಿ ಮೆರವಣಿಗೆ ಕುಕ್ಕಾಜೆ ಸಿದ್ಧಿವಿನಾಯಕ ಭಜನಾ ಮಂದಿರದಿಂದ ಆರಂಭಗೊಳ್ಳಲಿದ್ದು, ಮಂಚಿ ಗ್ರಾ ಪಂ ಅಧ್ಯಕ್ಷ ಜಿ ಎಂ ಇಬ್ರಾಹಿಂ ಅವರು ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆಗೈಯುವರು. ಕುಕ್ಕಾಜೆ ಭಜನಾ ಮಂದಿರ ಅಧ್ಯಕ್ಷ ಎನ್ ಸಂಜೀವ ಆಚಾರ್ಯ ಮೆರವಣಿಗೆ ಉದ್ಘಾಟಿಸುವರು. ಸಂಜೆ 4.30ಕ್ಕೆ ಸಾಹಿತಿ, ಕನ್ನಡ ಪ್ರಾಧ್ಯಾಪಕರು ಡಾ ನಾಗವೇಣಿ ಮಂಚಿ ಅವರು ಸಮ್ಮೇಳನ ಉದ್ಘಾಟಿಸುವರು. ವಸ್ತು ಪ್ರದರ್ಶನವನ್ನು ಡಾ ಮುಕುಂದ ಪ್ರಭು ಉದ್ಘಾಟಿಸುವರು, ಪುಸ್ತಕ ಮಳಿಗೆಯನ್ನು ಚಂದ್ರಹಾಸ ರೈ ಬಾಲಾಜಿಬೈಲು ಉದ್ಘಾಟಿಸುವರು. ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಬಿ ರಮಾನಾಥ ರೈ, ಕನ್ನಡ ಮತ್ತು ಸಂಸ್ಕøತಿ ಇಲಾಖಾ £ರ್ದೇಶಕಿ ಧರಣಿದೇವಿ ಮಾಲಗಿತ್ತಿ ಸಹಿತ ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಸಭಾ ಕಾರ್ಯಕ್ರಮದ ಬಳಿಕ ಮಂಚಿ ಕೊಳ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಬಬ್ರುವಾಹನ ಕಾಳಗ- ಅಗ್ರಪೂಜೆ ಯಕ್ಷಗಾನ ನಡೆಯಲಿದೆ.
ಡಿಸೆಂಬರ್ 5 ರಂದು ಬೆಳಗ್ಗೆ ಗಮಕ ವಾಚನ, ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ವೈಭವ ನಡೆಯಲಿದೆ. 10.30ರಿಂದ ಅನಿತಾ ನರೇಶ್ ಮಂಚಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ವಾಚನ, ಗಾಯನ, ಕುಂಚ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಕೃಷಿ ಹಾಗೂ ಸಾಹಿತ್ಯ ವಿಚಾರದಲ್ಲಿ ವಿಚಾರಗೋಷ್ಠಿ ಸಂಕಪ್ಪ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ನಂತರ ಮಂಚಿ ಕೊಳ್ನಾಡು ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಡಾ ವೀಣಾ ತೋಳ್ಪಾಡಿ ಹಾಗೂ ಅನಸೂಯಾ ರಾವ್ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಅಪರಾಹ್ನ 2 ಗಂಟೆಗೆ ಸಂಘ, ಸಂಸ್ಥೆಗಳಿಗೆ ಪುರಸ್ಕಾರ, 3 ಗಂಟೆಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಭಾಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ ಎಂ ಪಿ ಶ್ರೀನಾಥ ವಹಿಸಲಿದ್ದಾರೆ. ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ಟ ಸಮಾರೋಪ ಭಾಷಣ ಮಾಡುವರು. ಬಳಿಕ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.
0 comments:
Post a Comment