ಮಂಗಳೂರು, ಜನವರಿ 04, 2025 (ಕರಾವಳಿ ಟೈಮ್ಸ್) : ಸಂಸತ್ತಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ಹಾಗೂ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಜನವರಿ 6 ರಂದು ಸೋಮವಾರ ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥ’ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಗೆ ನಗರದ ಅಂಬೇಡ್ಕರ್ ವೃತ್ತದಿಂದ (ಹಳೆ ಜ್ಯೋತಿ ಸರ್ಕಲ್) ಮಿನಿ ವಿಧಾನ ಸೌಧದವರೆಗೆ ‘ಸಂವಿಧಾನ ಸಂರಕ್ಷಣಾ ಜಾಥ’ ನಡೆದು ಬಳಿಕ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment