ಬಂಟ್ವಾಳ, ಜನವರಿ 14, 2025 (ಕರಾವಳಿ ಟೈಮ್ಸ್) : ಡೀಸೆಲ್ ಸಾಗಾಟದ ಟ್ಯಾಂಕರ್ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲೇ ಉರುಳಿ ಬಿದ್ದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿನ ಹೆದ್ದಾರಿಯಲ್ಲಿ ಮಂಗಳವಾರ ಮದ್ಯಾಹ್ನದ ವೇಳೆ ಸಂಭವಿಸಿದೆ.
ಘಟನೆಯಿಂದ ಟ್ಯಾಂಕರಿನಲ್ಲಿ ಸಣ್ಣ ಪ್ರಮಾಣದ ತೂತಾಗಿದ್ದು, ಮೂಲಕ ಡಿಸೇಲ್ ಸೋರಿಕೆ ಆತಂಕ ಉಂಟಾಗಿತ್ತು. ಘಟನೆಯಿಂದ ತಾಸಿಗೂ ಮೀರಿದ ಸಮಯ ಹೆದ್ದಾರಿ ಸಂಚಾರದಲ್ಲಿ ಅಸ್ತವ್ಯಸ್ತತೆ ಉಂಟಾಗಿತ್ತು. ಟ್ಯಾಂಕರ್ ಚಾಲಕ ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾನೆ.
ಮಂಗಳೂರಿನಿಂದ ಡೀಸೆಲ್ ಹೇರಿಕೊಂಡು ಚೆನ್ನೈ ಕಡೆ ಪ್ರಯಾಣ ಬೆಳೆಸಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ಮೀರಿ ಕಲ್ಲಡ್ಕ ಸರ್ವಿಸ್ ರಸ್ತೆಯಲ್ಲಿ ಚರಂಡಿಗೆ ಪಲ್ಟಿಯಾಗಿದೆ ಎನ್ನಲಾಗಿದೆ. ಸ್ಥಳಕ್ಕಾಗಮಿಸಿ ಬಂಟ್ವಾಳ ಸಂಚಾರಿ ಪೆÇಲೀಸರು ಕ್ರೇನ್ ತರಿಸಿ ಲಾರಿಯನ್ನು ಬದಿಗೆ ಸರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
0 comments:
Post a Comment