ಬಂಟ್ವಾಳ, ಜನವರಿ 14, 2025 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಮೆಲ್ಕಾರ್-ಗುಡ್ಡೆಅಂಗಡಿ ನೂರುದ್ದೀನ್ ಜುಮಾ ಮಸೀದಿ ಸಮೀಪ ಅಂತ್ಯವಿಶ್ರಮಗೊಳ್ಳುತ್ತಿರುವ ಹಝ್ರತ್ ಶೈಖ್ ಮೌಲವಿ (ಖಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ಆಚರಿಸಿಕೊಂಡು ಬರುತ್ತಿರುವ 44ನೇ ವರ್ಷದ ಉರೂಸ್ ಕಾರ್ಯಕ್ರಮ ಜನವರಿ 22 ರಿಂದ 25ರವರೆಗೆ ಮಸೀದಿ ವಠಾರದಲ್ಲಿ ನಡೆಯಲಿದೆ.
ಜನವರಿ 22 ರಂದು ಬುಧವಾರ ಅಸ್ತಮಿಸಿದ ಗುರುವಾರ ಮಗ್ರಿಬ್ ನಮಾಝ್ ಬಳಿಕ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಸಮಸ್ತ ಮುಶಾವರ ಸದಸ್ಯರೂ, ದಕ್ಷಿಣ ಕನ್ನಡ ಜಿಲ್ಲಾ ಖಾಝಿಗಳೂ ಆಗಿರುವ ಶೈಖುನಾ ಅಲ್‍ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಿ ದುವಾಶಿರ್ವಚನಗೈಯುವರು. ಇರ್ಶಾದ್ ಹುಸೈನ್ ದಾರಿಮಿ ಅಲ್-ಜಝರಿ ಮಿತ್ತಬೈಲು ಅವರ ಗೌರವ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮೆಲ್ಕಾರ್ ವಹಿಸುವರು. ಮಸೀದಿ ಖತೀಬ್ ಕೆ ಪಿ ಮುಹಮ್ಮದ್ ಹಸ್ವೀಪ್ ದಾರಿಮಿ ಮುಖ್ಯ ಭಾಷಣಗೈಯುವರು.
ಜನವರಿ 23 ರಂದು ಗುರುವಾರ ಮಗ್ರಿಬ್ ನಮಾಝ್ ಬಳಿಕ ಸಯ್ಯಿದ್ ಇಬ್ರಾಹಿಂ ಬಾತಿಷ್ ತಂಙಳ್ ನೇತೃತ್ವದಲ್ಲಿ ಮಜ್ಲಿಸುನ್ನೂರ್ ಕಾರ್ಯಕ್ರಮ ನಡೆಯಲಿದ್ದು, ಅಬ್ದುಲ್ ಖಾದಿರ್ ದಾರಿಮಿ ಕುಕ್ಕಿಲ ಉಪನ್ಯಾಸಗೈಯುವರು. ಜನವರಿ 24 ರಂದು ಶುಕ್ರವಾರ ಮಗ್ರಿಬ್ ನಮಾಝ್ ಬಳಿಕ ಅಬೂಬಕ್ಕರ್ ಸಿದ್ದೀಕ್ ಅಝ್‍ಹರಿ ಪಯ್ಯನ್ನೂರು ಅವರು ಧಾರ್ಮಿಕ ಉಪನ್ಯಾಸಗೈಯುವರು.
ಜನವರಿ 25 ರಂದು ಸುಬ್‍ಹಿ ನಮಾಝ್ ಬಳಿಕ ಎ ಎ ಇಬ್ರಾಹಿಂ ಮುಸ್ಲಿಯಾರ್ ಬೋಗೋಡಿ ಅವರ ನೇತೃತ್ವದಲ್ಲಿ ಖತಮುಲ್ ಕುರ್-ಆನ್, ಮಗ್ರಿಬ್ ನಮಾಝ್ ಬಳಿಕ ಸಯ್ಯಿದ್ ಹುಸೈನ್ ಬಾ-ಅಲವಿ ತಂಙಳ್ ಕುಕ್ಕಾಜೆ ಅವರ ನೇತೃತ್ವದಲ್ಲಿ ಮೌಲಿದ್ ಪಾರಾಯಣ ನಡೆಯಲಿದೆ. ಇಶಾ ನಮಾಝ್ ಬಳಿಕ ಸಮಾರೋಪ ಸಮಾರಂಭ ನಡೆಯಲಿದ್ದು, ಸಯ್ಯಿದ್ ಎನ್ ಪಿ ಎಂ ಶರಫುದ್ದೀನ್ ತಂಙಳ್ ಕುನ್ನುಂಗೈ ಅವರು ದುವಾಶಿರ್ವಚನಗೈಯಲಿದ್ದು, ತೋಡಾರು ಬದ್ರಿಯಾ ಜುಮಾ ಮಸೀದಿ ಖತೀಬ್ ಐ ಕೆ ಮೂಸಾ ದಾರಿಮಿ ಮುಖ್ಯ ಭಾಷಣಗೈಯುವರು. ಪ್ರತಿದಿನ ಕಾರ್ಯಕ್ರಮ ಆರಂಭಕ್ಕೆ ಮುಂಚಿತವಾಗಿ ನೂರುದ್ದೀನ್ ಮದ್ರಸ ಮಕ್ಕಳಿಂದ ದಫ್ ಪ್ರದರ್ಶನ ನಡೆಯಲಿದೆ. ಸಮಾರೋಪ ಸಮಾರಂಭದ ಬಳಿಕ ಸಾರ್ವಜನಿಕ ಅನ್ನದಾನ ನಡೆಯಲಿದೆ ಎಂದು ಮಸೀದಿ ಅಧ್ಯಕ್ಷ ಅಬೂಬಕ್ಕರ್ ಮೆಲ್ಕಾರ್ ತಿಳಿಸಿದ್ದಾರೆ.
0 comments:
Post a Comment