ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ಸಾಹಿತ್ಯ ಜಾತ್ರೆ : ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ - Karavali Times ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ಸಾಹಿತ್ಯ ಜಾತ್ರೆ : ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ - Karavali Times

728x90

1 January 2025

ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ಸಾಹಿತ್ಯ ಜಾತ್ರೆ : ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

 ಬಂಟ್ವಾಳ, ಜನವರಿ 01, 2025 (ಕರಾವಳಿ ಟೈಮ್ಸ್) : 23ನೇ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಚಿ-ಕೊಳ್ನಾಡು ಹೈಸ್ಕೂಲಿನಲ್ಲಿ ಹಿರಿಯ ಸಾಹಿತಿ ಎಳೆಯರ ಗೆಳೆಯ ಮುಳಿಯ ಖ್ಯಾತಿಯ ಮುಳಿಯ ಶಂಕರ ಭಟ್ಟ ಅವರ ಸರ್ವಾಧ್ಯಕ್ಷತೆಯಲ್ಲಿ ಜನವರಿ 4 ಮತ್ತು 5ರಂದು ನಡೆಯಲಿದೆ ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ ಇರಾ-ಬಾಳಿಕೆ ಅವರುಗಳು ತಿಳಿಸಿದರು.  

ಬಿ ಸಿ ರೋಡಿನ ಕನ್ನಡ ಭವನದಲ್ಲಿ ಬುಧವಾರ ಸಂಜೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರುಗಳು, ಜನವರಿ 4 ರಂದು ಶನಿವಾರ ಬೆಳಿಗ್ಗೆ 10 ಗಂಟೆಗೆ ಕೊಳ್ನಾಡು ಗ್ರಾ ಪಂ ಅಧ್ಯಕ್ಷ ಮುಹಮ್ಮದ್ ಅಶ್ರಫ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ 2 ದಿನಗಳ ಸಾಹಿತ್ಯ ಜಾತ್ರೆಗೆ ಚಾಲನೆ ನೀಡುವರು. ದ ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಪರಿಷತ್ ಧ್ವಜಾರೋಹಣ ನೆರವೇರಿಸಲಿದ್ದು, ತಾಲೂಕು ಕಸಾಪ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಕನ್ನಡ ಧ್ವಜಾರೋಹಣಗೈಯುವರು. 

ಅಪರಾಹ್ನ 3 ಗಂಟೆಗೆ ಕನ್ನಡ ಭುವನೇಶ್ವರಿ ಮೆರವಣಿಗೆ ಕುಕ್ಕಾಜೆ ಸಿದ್ಧಿವಿನಾಯಕ ಭಜನಾ ಮಂದಿರದಿಂದ ಆರಂಭಗೊಳ್ಳಲಿದ್ದು, ಮಂಚಿ ಗ್ರಾ ಪಂ ಅಧ್ಯಕ್ಷ ಜಿ ಎಂ ಇಬ್ರಾಹಿಂ ಅವರು ಕನ್ನಡ ಭುವನೇಶ್ವರಿಗೆ ಪುಷ್ಪಾರ್ಚನೆಗೈಯುವರು. ಕುಕ್ಕಾಜೆ ಭಜನಾ ಮಂದಿರ ಅಧ್ಯಕ್ಷ ಎನ್ ಸಂಜೀವ ಆಚಾರ್ಯ ಮೆರವಣಿಗೆ ಉದ್ಘಾಟಿಸುವರು. ಸಂಜೆ 4.30ಕ್ಕೆ ಸಾಹಿತಿ, ಕನ್ನಡ ಪ್ರಾಧ್ಯಾಪಕರು ಡಾ ನಾಗವೇಣಿ ಮಂಚಿ ಅವರು ಸಮ್ಮೇಳನ ಉದ್ಘಾಟಿಸುವರು. ವಸ್ತು ಪ್ರದರ್ಶನವನ್ನು ಡಾ ಮುಕುಂದ ಪ್ರಭು ಉದ್ಘಾಟಿಸುವರು, ಪುಸ್ತಕ ಮಳಿಗೆಯನ್ನು ಚಂದ್ರಹಾಸ ರೈ ಬಾಲಾಜಿಬೈಲು ಉದ್ಘಾಟಿಸುವರು. ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ಸಂಸದ ಬ್ರಿಜೇಶ್ ಚೌಟ, ಮಾಜಿ ಸಚಿವ ಬಿ ರಮಾನಾಥ ರೈ, ಕನ್ನಡ ಮತ್ತು ಸಂಸ್ಕøತಿ ಇಲಾಖಾ ನಿರ್ದೇಶಕಿ ಧರಣಿದೇವಿ ಮಾಲಗಿತ್ತಿ ಸಹಿತ ವಿವಿಧ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು. 

ಸಭಾ ಕಾರ್ಯಕ್ರಮದ ಬಳಿಕ ಮಂಚಿ ಕೊಳ್ನಾಡು ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಬಬ್ರುವಾಹನ ಕಾಳಜ, ಅಗ್ರಪೂಜೆ ಯಕ್ಷಗಾನ ನಡೆಯಲಿದೆ ಎಂದ ಅವರು ಡಿಸೆಂಬರ್ 5 ರಂದು ಬೆಳಗ್ಗೆ ಗಮಕ ವಾಚನ, ಬಳಿಕ ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ ನಂತರ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೃತ್ಯ ವೈಭವ ನಡೆಯಲಿದೆ. 10.30ರಿಂದ ಅನಿತಾ ನರೇಶ್ ಮಂಚಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ವಾಚನ, ಗಾಯನ, ಕುಂಚ ಕಾರ್ಯಕ್ರಮ ನಡೆಯಲಿದ್ದು, ಬಳಿಕ ಕೃಷಿ ಹಾಗೂ ಸಾಹಿತ್ಯ ವಿಚಾರದಲ್ಲಿ ವಿಚಾರಗೋಷ್ಠಿ ಸಂಕಪ್ಪ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. 

ಬಳಿಕ ಮಂಚಿ ಕೊಳ್ನಾಡು ಶಾಲಾ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನೀಡಲಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಡಾ ವೀಣಾ ತೋಳ್ಪಾಡಿ ಹಾಗೂ ಅನಸೂಯಾ ರಾವ್ ಅವರಿಂದ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಅಪರಾಹ್ನ 2 ಗಂಟೆಗೆ ಸಂಘ, ಸಂಸ್ಥೆಗಳಿಗೆ ಪುರಸ್ಕಾರ, 3 ಗಂಟೆಯಿಂದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. 

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಭಾಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ. ಎಂ ಪಿ ಶ್ರೀನಾಥ ವಹಿಸಲಿದ್ದಾರೆ. ವಿದ್ವಾಂಸ ಹಿರಣ್ಯ ವೆಂಕಟೇಶ್ವರ ಭಟ್ಟ ಸಮಾರೋಪ ಭಾಷಣ ಮಾಡುವರು. ಬಳಿಕ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದ ಅವರುಗಳು ಸಮ್ಮೇಳನದ ಸಮ್ಮೇಳನ ಯಶಸ್ಸಿಗೆ ಹಲವು ಸಮಿತಿಗಳನ್ನು ರಚಿಸಲಾಗಿದ್ದು ಶಾಲಾಭಿವೃದ್ಧಿ ಸಮಿತಿ, ಹೈಸ್ಕೂಲಿನ ಅಧ್ಯಾಪಕ ವೃಂದ, ಹಿರಿಯ ವಿದ್ಯಾರ್ಥಿಗಳು, ಹಾಗೂ ವಿದ್ಯಾರ್ಥಿಗಳು, ಪೆÇೀಷಕರು ಪೂರ್ಣ ಸಹಕಾರ ನೀಡುತ್ತಿದ್ದಾರೆ. ಈಗಾಗಲೇ ಚಿತ್ರಕಲಾ ಅಧ್ಯಾಪಕರ ತಂಡ ಸಭಾಂಗಣದಲ್ಲಿ ವರ್ಣಚಿತ್ತಾರ ಮೂಡಿಸುವ ಕಾರ್ಯ ಆರಂಭಿಸಿದ್ದು, ಮಂಚಿ, ಕೊಳ್ನಾಡು ಪರಿಸರದಲ್ಲಿ ಸಾಹಿತ್ಯ ಹಬ್ಬದ ವಾತಾವರಣ ಸೃಷ್ಟಿಯಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಪ್ರಧಾನ ಸಂಯೋಜಕ ರಾಮಪ್ರಸಾದ್ ರೈ ತಿರುವಾಜೆ, ಕನ್ನಡ ಸಾಹಿತ್ಯ ಪರಿಷತ್ತು ಗೌರವ ಪ್ರಧಾನ ಕಾರ್ಯದರ್ಶಿಗಳಾದ ವಿ ಸು ಭಟ್, ರಮಾನಂದ ನೂಜಿಪ್ಪಾಡಿ, ಗೌರವ ಕೋಶಾಧಿಕಾರಿ ಡಿ ಬಿ ಅಬ್ದುಲ್ ರಹಿಮಾನ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ, ಸಂಚಾಲಕ ಬಿ ಎಂ ಅಬ್ಬಾಸ್ ಅಲಿ, ಕೋಶಾಧಿಕಾರಿ ಸುಲೈಮಾನ್ ಜಿ ಸುರಿಬೈಲು, ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ವಿಟ್ಲ, ಆರ್ಥಿಕ ಸಮಿತಿ ಸಂಚಾಲಕ ನಿಶ್ಚಲ್ ಜಿ ಶೆಟ್ಟಿ ಕಲ್ಲಾಡಿ, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು, ಕಸಾಪ ಸಂಘ-ಸಂಸ್ಥೆಗಳ ಪ್ರತಿನಿಧಿ ಅಬೂಬಕ್ಕರ್ ಅಮ್ಮುಂಜೆ ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 4-5 ರಂದು ಮಂಚಿ-ಕೊಳ್ನಾಡು ಶಾಲೆಯಲ್ಲಿ ಸಾಹಿತ್ಯ ಜಾತ್ರೆ : ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳೊಂದಿಗೆ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ Rating: 5 Reviewed By: karavali Times
Scroll to Top