ಬಂಟ್ವಾಳ, ಜನವರಿ 21, 2025 (ಕರಾವಳಿ ಟೈಮ್ಸ್) : ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಮೈಸೂರು ಇದರ ಕೇರಳ ಗಡಿನಾಡ ಘಟಕವಾದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ ಬಂದು 25 ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಬೆಳ್ಳಿ ಹಬ್ಬ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ಮಾರ್ಚ್ 27 ಗುರುವಾರದಂದು ನಡೆಯುವ ಕಾಸರಗೋಡು ಜಿಲ್ಲಾ 7ನೇ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ಇತ್ತೀಚೆಗೆ ನಡೆಯಿತು.
ವಿಟ್ಲದಲ್ಲಿ ನಡೆದ ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸ್ಥಾಪಕ ರಾಜ್ಯ ಪ್ರಧಾನ ಸಂಚಾಲಕ ಡಾ ಎಂ ಜಿ ಆರ್ ಅರಸ್ ಅವರು ಬಿಡುಗಡೆಗೊಳಿಸಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲಕೃಷ್ಣ ಶಾಸ್ತ್ರಿ, ಸುಳ್ಯ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಮತಿ ಅಶ್ವಿನಿ ಕೋಡಿಬೈಲು, ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಆನಂದ ರೈ ಅಡ್ಕಸ್ಥಳ, ರಾಧಾಕೃಷ್ಣ ಕೆ ಉಳಿಯತ್ತಡ್ಕ, ಇರಾ ನೇಮು ಪೂಜಾರಿ, ಮುಳಿಯ ಶಂಕರ ಭಟ್, ಸುದರ್ಶನ್ ಪಡಿಯಾರ್ ವಿಟ್ಲ, ವೇಣುಗೋಪಾಲ ಶೆಟ್ಟಿ ಮರುವಾಳ, ನಟರಾಜ ಮೈಸೂರು, ಶ್ರೀಮತಿ ಸೀತಾಲಕ್ಷ್ಮಿ ವರ್ಮ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಉಳ್ಳಾಲ, ಮುಲ್ಕಿ, ಬೆಳ್ತಂಗಡಿ, ಸುಳ್ಯ, ಕಡಬ, ಪುತ್ತೂರು, ಮೂಡಬಿದ್ರೆ ತಾಲೂಕಿನ ಸುಮಾರು 100 ಮಂದಿ ಚುಟುಕು ಕವಿಗಳು ಮತ್ತು ವಿದ್ಯಾರ್ಥಿ ಕವಿಗಳು ಹಾಗೂ ಕಾಸರಗೋಡು ಜಿಲ್ಲೆಯಿಂದ 100 ಮಂದಿ ಚುಟುಕು ಕವಿಗಳು ಭಾಗವಹಿಸುವಂತೆ ಆಹ್ವಾನಿಸಲಾಗಿದೆ. ಶಾಲಾ, ಕಾಲೇಜಿನ ವಿದ್ಯಾರ್ಥಿಗಳು,ಅದ್ಯಾಪಕರಿಗೂ, ಆಹ್ವಾನ ನೀಡಲಾಗಿದೆ.
ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಹಾಗೂ ಎಲ್ಲಾ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸುಮಾರು 200 ಮಂದಿ ಭಾಗವಹಿಸಲಿದ್ದಾರೆ ಎಂದು ಕಾಸರಗೋಡು ಜಿಲ್ಲಾ ಚುಟುಕು ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment