ಅಬ್ಬಾಸ್ ನೇರಳಕಟ್ಟೆ (ಅಧ್ಯಕ್ಷ) |
ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ (ಪ್ರಧಾನ ಕಾರ್ಯದರ್ಶಿ) |
ಪಿ.ಕೆ. ಅಬ್ಬಾಸ್ ಪರ್ಲೊಟ್ಟು (ಕೋಶಾಧಿಕಾರಿ) |
ಬಂಟ್ವಾಳ, ಜನವರಿ 21, 2025 (ಕರಾವಳಿ ಟೈಮ್ಸ್) : ಮಾಣಿ ಸಮೀಪದ ಕೊಡಾಜೆ ಬದ್ರಿಯಾ ಜುಮಾ ಮಸೀದಿ ನೂತನ ಅಧ್ಯಕ್ಷರಾಗಿ ಅಬ್ಬಾಸ್ ನೇರಳಕಟ್ಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಸೀದಿ ಗೌರವಾಧ್ಯಕ್ಷ ಸಯ್ಯಿದ್ ಅಲೀ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಮಸೀದಿಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಉಪಾಧ್ಯಕ್ಷರಾಗಿ ಸಿದ್ದೀಕ್ ಪರ್ಲೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ, ಕಾರ್ಯದರ್ಶಿಯಾಗಿ ಶಾಹುಲ್ ಹಮೀದ್ (ಅಮ್ಮಿ) ಪರ್ಲೊಟ್ಟು, ಕೋಶಾಧಿಕಾರಿಯಾಗಿ ಪಿ.ಕೆ. ಅಬ್ಬಾಸ್ ಪರ್ಲೊಟ್ಟು, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಲತೀಫ್ ನೇರಳಕಟ್ಟೆ, ಹಬೀಬ್ ಕೊಡಾಜೆ, ಫಾರೂಕ್ ಗೋಳಿಕಟ್ಟೆ ಹಾಗೂ ಇಸ್ಮಾಯಿಲ್ ನೇರಳಕಟ್ಟೆ ಅವರು ಆಯ್ಕೆಯಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಇಬ್ರಾಹಿಂ ರಾಜ್ ಕಮಲ್ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಸಹಕರಿಸಿದರು. ನವಾಝ್ ಭಗವಂತಕೋಡಿ ವರದಿ ವಾಚಿಸಿ, ಲೆಕ್ಕಪತ್ರ ಮಂಡಿಸಿದರು. ಇಲ್ಯಾಸ್ ನೇರಳಕಟ್ಟೆ ಸ್ವಾಗತಿಸಿ, ಎಸ್.ಎಂ. ರಫೀಕ್ ಹಾಜಿ ನೇರಳಕಟ್ಟೆ ವಂದಿಸಿದರು.
0 comments:
Post a Comment