ಜನವರಿ 19 ರಂದು ಬಂಟ್ವಾಳ ಬಿಲ್ಲವರ ಸಂಘಗಳ ಸಂಯೋಜನೆಯಲ್ಲಿ ಭಂಡಾರಿಬೆಟ್ಟು ಎಸ್.ವಿ.ಎಸ್. ಮೈದಾನದಲ್ಲಿ ಅದ್ದೂರಿ ಕೋಟಿ ಚೆನ್ನಯ ಕ್ರೀಡೋತ್ಸವ : ಬೇಬಿ ಕುಂದರ್ - Karavali Times ಜನವರಿ 19 ರಂದು ಬಂಟ್ವಾಳ ಬಿಲ್ಲವರ ಸಂಘಗಳ ಸಂಯೋಜನೆಯಲ್ಲಿ ಭಂಡಾರಿಬೆಟ್ಟು ಎಸ್.ವಿ.ಎಸ್. ಮೈದಾನದಲ್ಲಿ ಅದ್ದೂರಿ ಕೋಟಿ ಚೆನ್ನಯ ಕ್ರೀಡೋತ್ಸವ : ಬೇಬಿ ಕುಂದರ್ - Karavali Times

728x90

16 January 2025

ಜನವರಿ 19 ರಂದು ಬಂಟ್ವಾಳ ಬಿಲ್ಲವರ ಸಂಘಗಳ ಸಂಯೋಜನೆಯಲ್ಲಿ ಭಂಡಾರಿಬೆಟ್ಟು ಎಸ್.ವಿ.ಎಸ್. ಮೈದಾನದಲ್ಲಿ ಅದ್ದೂರಿ ಕೋಟಿ ಚೆನ್ನಯ ಕ್ರೀಡೋತ್ಸವ : ಬೇಬಿ ಕುಂದರ್

 ಬಂಟ್ವಾಳ, ಜನವರಿ 16, 2025 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವವು ಜನವರಿ 19 ಭಾನುವಾರ ಬಂಟ್ವಾಳ-ಭಂಡಾರಿಬೆಟ್ಟು ಎಸ್ ವಿ ಎಸ್ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಕೋಟಿ ಚೆನ್ನಯ ಕ್ರೀಡೋತ್ಸವ ಸಮಿತಿ ಸಂಚಾಲಕ ಬೇಬಿ ಕುಂದರ್ ತಿಳಿಸಿದರು. 

ಬಿ ಸಿ ರೋಡಿನಲ್ಲಿ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕ್ರೀಡಾಕೂಟದಲ್ಲಿ ಬಂಟ್ವಾಳ ತಾಲೂಕಿನ 24 ಬಿಲ್ಲವ ಗ್ರಾಮ ಸಮಿತಿಗಳ ತಂಡಗಳು ವಿವಿಧ ಗುಂಪು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಎಲ್ಲ ಸಮಿತಿಗಳ ಆಕರ್ಷಕ ಪಥ ಸಂಚಲನವೂ ನಡೆಯಲಿದೆ. ಮಕ್ಕಳು, ಹಿರಿಯರು, ಮಹಿಳೆಯರು ಸೇರಿದಂತೆ ಎಲ್ಲಾ ವಿಭಾಗಗಳಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದರು. 

ಕೇಂದ್ರದ ಮಾಜಿ ಹಣಕಾಸು ಮಂತ್ರಿ ಬಿ ಜನಾರ್ದನ ಪೂಜಾರಿ ಕ್ರೀಡೋತ್ಸವ ಉದ್ಘಾಟಿಸಲಿದ್ದು, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ ಸಂಜೀವ ಪೂಜಾರಿ ಗುರುಕೃಪಾ ಅವರು ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಗೌರವ ರಕ್ಷೆ ಸ್ವೀಕರಿಸಲಿದ್ದು, ಬಂಟ್ವಾಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್ ಧ್ವಜಾರೋಹಣಗೈಯುವರು. 

ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನಾ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕ್ರೀಡಾ ಜ್ಯೋತಿ ಹಸ್ತಾಂತರಿಸಲಿದ್ದು, ಸಂಸದ ಕೋಟ ಶ್ರೀನಿವಾಸ್ ಪೂಜಾರಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸುವರು. ಶಾಸಕ ಉಮಾನಾಥ ಕೋಟ್ಯಾನ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ  ಎಚ್ ಎಸ್ ಸಾಯಿರಾಮ್, ಕೋಶಾಧಿಕಾರಿ ಆರ್ ಪದ್ಮರಾಜ್, ಮುಂಬೈ ಭಾರತ್ ಕೊ-ಅಪರೇಟಿವ್ ಬ್ಯಾಂಕ್ ಲಿ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಅಧ್ಯಕ್ಷ ವೇದಕುಮಾರ್, ಅಖಿಲ ಭಾರತ ಬಿಲ್ಲವರ ಯೂನಿಯನ್ ಅಧ್ಯಕ್ಷ ನವೀನ್‍ಚಂದ್ರ ಡಿ ಸುವರ್ಣ, ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ಮಾಜಿ ಶಾಸಕ ಎ ರುಕ್ಮಯ್ಯ ಪೂಜಾರಿ, ಕಟಪಾಡಿ ವಿಶ್ವಾನಾಥ ಕ್ಷೇತ್ರದ ಅಧ್ಯಕ್ಷ ಬಿ ಎನ್ ಶಂಕರ ಪೂಜಾರಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ನಮ್ಮ ಕುಡ್ಲ ಆಡಳಿತ ನಿರ್ದೇಶಕ ಲೀಲಾಕ್ಷ ಬಿ ಕರ್ಕೇರಾ, ಬಿಲ್ಲವ ಬ್ರಿಗೇಡ್ ಅಧ್ಯಕ್ಷ ಸದಾನಂದ ಪೂಜಾರಿ, ಉದ್ಯಮಿ ಸುನಿತ್ ಕಿಶನ್, ಪೊಲೀಸ್ ಅಧಿಕಾರಿ ಶಾಂತಾರಾಮ್ ಕುಂದರ್, ಅಬಕಾರಿ ಇಲಾಖಾ ಸಹಾಯಕ ಎಸ್ಪಿ ಗಾಯತ್ರಿ ಎಂ ಶಿವಕುಮಾರ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ ಕೋಟ್ಯಾನ್, ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷ ಸತ್ಯಜಿತ್ ಸುರತ್ಕಲ್, ಮುಂಬೈ ಬಿಲ್ಲವ ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ ಅಮೀನ್, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್ ಕೂಳೂರು, ಕಂಕನಾಡಿ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಚಿತ್ತರಂಜನ್, ಶ್ರೀ ಕ್ಷೇತ್ರ ಗೆಜ್ಜೆಗಿರಿ ಅಧ್ಯಕ್ಷ ರವಿ ಪೂಜಾರಿ ಚಿಲಿಂಬಿ, ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ, ಪುತ್ತೂರು ಅಕ್ಷಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಜಯಂತ ನಡುಬೈಲು, ತುಳುನಾಡು ಬಿರುವೆರ್ ಅಧ್ಯಕ್ಷ ಲೋಕೇಶ್ ಕೋಡಿಕೆರೆ, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷೆ ಉರ್ಮೀಳಾ ರಮೇಶ್, ವೆನ್‍ಲಾಕ್ ಯುರೋಲಾಜಿ ವಿಭಾಗದ ಮುಖ್ಯಸ್ಥ ಡಾ ಸದಾನಂದ ಪೂಜಾರಿ, ಉದ್ಯಮಿ ಮನೋಜ್ ಸರಿಪಲ್ಲ, ಪ್ರಶಾಂತ್ ಸನಿಲ್ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಬೇಬಿ ಕುಂದರ್ ವಿವರಿಸಿದರು. 

ಈ ಸಂದರ್ಭ ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಕಾರ್ಯದರ್ಶಿ ರಮೇಶ್ ಎಂ ತುಂಬೆ, ಮಹಿಳಾ ಸಮಿತಿ ಅಧ್ಯಕ್ಷೆ ಶೈಲಜಾ ರಾಜೇಶ್, ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಕ್ರೀಡೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಕೋಶಾಧಿಕಾರಿ ಗಣೇಶ್ ಪೂಜಾರಿ ಪೂಂಜರೆಕೋಡಿ, ಜೊತೆ ಕಾರ್ಯದರ್ಶಿ ಹರೀಶ್ ಕೋಟ್ಯಾನ್ ಕುದನೆ, ಸುಂದರ ಪೂಜಾರಿ ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 19 ರಂದು ಬಂಟ್ವಾಳ ಬಿಲ್ಲವರ ಸಂಘಗಳ ಸಂಯೋಜನೆಯಲ್ಲಿ ಭಂಡಾರಿಬೆಟ್ಟು ಎಸ್.ವಿ.ಎಸ್. ಮೈದಾನದಲ್ಲಿ ಅದ್ದೂರಿ ಕೋಟಿ ಚೆನ್ನಯ ಕ್ರೀಡೋತ್ಸವ : ಬೇಬಿ ಕುಂದರ್ Rating: 5 Reviewed By: karavali Times
Scroll to Top