ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆ ಮಾರ್ಚ್ ಅಂತ್ಯಕ್ಕೆ ಪೂರ್ಣ : ಸಂಸದ ಬ್ರಿಜೇಶ್ ಚೌಟ - Karavali Times ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆ ಮಾರ್ಚ್ ಅಂತ್ಯಕ್ಕೆ ಪೂರ್ಣ : ಸಂಸದ ಬ್ರಿಜೇಶ್ ಚೌಟ - Karavali Times

728x90

30 January 2025

ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆ ಮಾರ್ಚ್ ಅಂತ್ಯಕ್ಕೆ ಪೂರ್ಣ : ಸಂಸದ ಬ್ರಿಜೇಶ್ ಚೌಟ

ಬಂಟ್ವಾಳ, ಜನವರಿ 30, 2024 (ಕರಾವಳಿ ಟೈಮ್ಸ್) : ಕಲ್ಲಡ್ಕ ಪ್ಲೈ ಓವರ್ ಹಾಗೂ ಸರ್ವಿಸ್ ರಸ್ತೆಯ ಕಾಮಗಾರಿ ಬಹುತೇಕ ಮಾರ್ಚ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, ಎಪ್ರಿಲ್ ತಿಂಗಳಲ್ಲಿ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಸಂಸದ ಕ್ಯಾ ಬ್ರಿಜೇಶ್ ಚೌಟ ಹೇಳಿದರು. 

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಜೊತೆ ಗುರುವಾರ ಬಿ ಸಿ ರೋಡಿನಿಂದ ಉಪ್ಪಿನಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ ನಡೆಸಿದ ಬಳಿಕ ಮಾತನಾಡಿದ ಅವರು   ಬಿ ಸಿ ರೋಡಿನಿಂದ ಪೆರಿಯಶಾಂತಿವರೆಗೆ ಸುಮಾರು 45 ಕಿ ಮೀ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಮಳೆಗಾಲದ ಮೊದಲು ಮುಗಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡುವ ಭರವಸೆಯನ್ನು ಗುತ್ತಿಗೆ ಕಂಪೆನಿ ನೀಡಿದೆ. ಬ್ಲಾಸ್ಟಿಂಗ್ ಸಮಸ್ಯೆ ಇರುವ ಕಡೆ ಮಾತ್ರ ಕಾಮಗಾರಿ ಒಂದಷ್ಟು ವಿಳಂಬವಾಗಬಹುದು. ಅದು ಬಿಟ್ಟರೆ ಉಳಿದೆಲ್ಲಾ ಕಡೆ ಸಂಚಾರಕ್ಕೆ ಅವಕಾಶ ಮಾಡಿಕೊಡುವುದಾಗಿ ಅವರು ತಿಳಿಸಿದರು.

   ಮೆಲ್ಕಾರ್ ಸಮೀಪದ ನರಹರಿ ಹಾಗೂ ಉಪ್ಪಿನಂಗಡಿ ಸಮೀಪದ ನೀರಕಟ್ಟೆ ಎಂಬಲ್ಲಿ ತಡೆಗೋಡೆ ಹಾಗೂ ಬ್ಲಾಸ್ಟಿಂಗ್ ಸಮಸ್ಯೆ ಇದ್ದು ರಸ್ತೆಯ ಕಾಮಗಾರಿಯನ್ನು ಪೂರ್ತಿಗೊಳಿಸುವಲ್ಲಿ ತುಸು ವಿಳಂಬವಾಗಬಹುದು. ಅದು ಬಿಟ್ಟರೆ ಉಳಿದಂತೆ ಎಲ್ಲೂ ಕೂಡ ರಸ್ತೆ ನಿರ್ಮಾಣಕ್ಕೆ ಅಡೆತಡೆಗಳಿಲ್ಲ. ಹೆದ್ದಾರಿ ನಿರ್ಮಾಣದ ವೇಳೆ ಕೆಲವು ಕಡೆಗಳಲ್ಲಿ ರಸ್ತೆ ಸಮಸ್ಯೆ, ಮಳೆಗಾಲದಲ್ಲಿ ಜಮೀನಿಗೆ ನೀರು ನುಗ್ಗುವ ಸಮಸ್ಯೆ, ಕ್ರಾಸಿಂಗ್ ಹೀಗೆ  ಇನ್ನಿತರ ಸಣ್ಣಪುಟ್ಟ ವ್ಯತ್ಯಾಸಗಳು ಇವೆ. ಈ ಬಗ್ಗೆ ಅಧಿಕಾರಿಗಳಲ್ಲಿ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಚರ್ಚಿಸುವುದಾಗಿ ಅವರು ತಿಳಿಸಿದರು.

  ಆರಂಭದಲ್ಲಿ ಬಿ ಸಿ ರೋಡಿನಲ್ಲಿ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಾಮಗಾರಿಯನ್ನು ವೀಕ್ಷಿಸಿದರು. ಈ ಸಂದರ್ಭ ಬಿಲ್ಲವ ಸಂಘದ ಪ್ರಮುಖರು ವೃತ್ತದ ಸುತ್ತ ಜಾಗವನ್ನು ಅಗಲೀಕರಣಗೊಳಿಸಿ, ವೃತ್ತದ ಸೌಂದರ್ಯವನ್ನು ಇನ್ನಷ್ಟು ಹೆಚ್ಚು ಮಾಡುವಂತೆ ಮನವಿ ಮಾಡಿದರು.

   ಪಾಣೆಮಂಗಳೂರು, ಮೆಲ್ಕಾರ್, ಮಾಣಿ, ಪೆರಮೊಗ್ರು, ಉಪ್ಪಿನಂಗಡಿ, ಸುಬ್ರಹ್ಮಣ್ಯ ಕ್ರಾಸ್ ಕಡೆಗಳಲ್ಲಿ ನಿರ್ಮಾಣವಾಗುತ್ತಿರುವ ಅಂಡರ್ ಪಾಸ್ ಹಾಗೂ ಕಲ್ಲಡ್ಕದಲ್ಲಿ ಅಂತಿಮ ಹಂತದಲ್ಲಿರುವ ಪ್ಲೈ ಓವರ್ ಕಾಮಗಾರಿ ವೀಕ್ಷಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಕಲ್ಲಡ್ಕ ಫ್ಲೈ ಓವರ್ ಹಾಗೂ ಸರ್ವಿಸ್ ರಸ್ತೆ ಮಾರ್ಚ್ ಅಂತ್ಯಕ್ಕೆ ಪೂರ್ಣ : ಸಂಸದ ಬ್ರಿಜೇಶ್ ಚೌಟ Rating: 5 Reviewed By: karavali Times
Scroll to Top