ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ವಿವಿಧ ಕ್ಷೇತ್ರದ ಸಾಧಕರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಸನ್ಮಾನ
ಬಂಟ್ವಾಳ, ಜನವರಿ 05, 2025 (ಕರಾವಳಿ ಟೈಮ್ಸ್) : (ದಿವಂಗತ ಗಂಗಾಧರ ರೈ ಬೋಳಂತೂರು ಮುಖ್ಯ ದ್ವಾರ, ದಿವಂಗತ ಕನ್ನಡ ಪಂಡಿತ್ ಎ ಪಿ ತಿಮ್ಮಯನ್ ವೇದಿಕೆ, ದಿವಂಗತ ಕಲ್ಲಾಡಿ ವಿಠಲ ಶೆಟ್ಟಿ ಪ್ರವೇಶ ದ್ವಾರ, ಬಿ ವಿ ಕಾರಂತ ಸಭಾಂಗಣ, ದಿವಂಗತ ನಾರಾಯಣ ಭಟ್, ನೂಜಿಬೈಲು ಪ್ರಾಂಗಣ) : ಸಾಹಿತ್ಯಿಕ ಚಟುವಟಿಕೆಯಲ್ಲಿ ಮಂಚಿಗೆ ಅಗ್ರಸ್ಥಾನ ಇದ್ದು, ಈ ಬಾರಿಯ ಕನ್ನಡ ಸಾಹಿತ್ಯ ಸಮ್ಮೇಳನ ಮಂಚಿಯಲ್ಲಿ ನಡೆಯುತ್ತಿರುವುದು ಹೆಚ್ಚು ಔಚಿತ್ಯಪೂರ್ಣ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು.
ಮಂಚಿ-ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆದ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳದಲ್ಲಿ ಭಾನುವಾರ ಸಂಜೆ ವಿವಿಧ ಕ್ಷೇತ್ರದ ಸಾಧಕರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಮಂಚಿ ಎಂಬ ಪುಟ್ಟ ಗ್ರಾಮದಲ್ಲಿ ವರ್ಷದ ಬಹುತೇಕ ಸಮಯಗಳಲ್ಲಿ ಸಾಹಿತ್ಯಿಕ ಚಟುವಟಿಕೆಗಳು, ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಸಾಹಿತ್ಯ ಕ್ಷೇತ್ರದಲ್ಲಿ ಮಂಚಿಯ ಹಲವು ಮಂದಿ ಸಾಧಕರು ಇತಿಹಾಸದಲ್ಲಿ ಗುರುತಿಸಲ್ಪಡುತ್ತಿದ್ದಾರೆ ಎಂದರು.
ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಕನ್ನಡಕ್ಕೆ ದಕ್ಕಿರುವುದು ಕನ್ನಡ ಭಾಷಾ ಸಾಹಿತ್ಯದ ಶ್ರೀಮಂತಿಕೆಗೆ ಹಿಡಿದ ಕೈಗನ್ನಡಿ ಎಂದ ರೈ ಸಾಹಿತ್ಯ ಕ್ಷೇತ್ರದ ಜೊತೆ ನನಗೆ ನಿಕಟ ಬಾಂಧವ್ಯ ಇಲ್ಲದಿದ್ದರೂ ನಾನೂ ಕೂಡಾ ಓರ್ವ ಸಾಹಿತ್ಯದ, ಕನ್ನಡದ ಬಲುದೊಡ್ಡ ಅಭಿಮಾನಿ ಎಂದು ಹೇಳಲು ಹೆಮ್ಮೆ ಪಡುತ್ತೇನೆ ಎಂದರು.
ಈ ಸಂದರ್ಭ ನಿವೃತ್ತ ಜೀವವಿಮಾ ಅಧಿಕಾರಿ ಎಂ ಡಿ ವೆಂಕಪ್ಪ ಮೂರ್ಜೆ, ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೆ ಕೃಷ್ಣಕುಮಾರ್ ಪೂಂಜಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್, ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಶ್ವನಾಥ ಬಂಟ್ವಾಳ, ಸ್ವಾಗತ ಸಮಿತಿ ಅಧ್ಯಕ್ಷ ಸತೀಶ್ ಕುಮಾರ್ ಆಳ್ವ ಇರಾ-ಬಾಳಿಕೆ, ಸ್ವಾಗತ ಸಮಿತಿ ಪ್ರಧಾನ ಸಂಯೋಜಕ ರಾಮ್ ಪ್ರಸಾದ್ ರೈ, ಪ್ರಧಾನ ಕಾರ್ಯದರ್ಶಿ ಎಂ ಡಿ ಮಂಚಿ, ಗೌರವ ಪ್ರಧಾನ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ಗೌರವ ಕೋಶಾಧಿಕಾರಿ ಡಿ ಬಿ ಅಬ್ದುಲ್ ರಹಿಮಾನ್, ಸಂಚಾಲಕರಾದ ಬಿ ಎಂ ಅಬ್ಬಾಸ್ ಅಲಿ, ಉಮಾನಾಥ ರೈ ಮೇರಾವು, ಉಪಾಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಕೋಶಾಧಿಕಾರಿ ಸುಲೈಮಾನ್ ಜಿ ಸುರಿಬೈಲು, ಗೌರವ ಸಲಹೆಗಾರ ರವೀಂದ್ರ ಕುಕ್ಕಾಜೆ, ಕಸಾಪ ಸಂಘ-ಸಂಸ್ಥೆಗಳ ಪ್ರತಿನಿಧಿ ಅಬೂಬಕ್ಕರ್ ಅಮ್ಮುಂಜೆ, ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ ವಿಟ್ಲ, ಆರ್ಥಿಕ ಸಮಿತಿ ಸಂಚಾಲಕ ನಿಶ್ಚಲ್ ಜಿ ಶೆಟ್ಟಿ ಕಲ್ಲಾಡಿ, ವಿಟ್ಲ ಹಾಗೂ ಪಾಣೆಮಂಗಳೂರು ಹೋಬಳಿ ಅಧ್ಯಕ್ಷರುಗಳಾದ ಗಣೇಶ್ ಪ್ರಸಾದ್ ಪಾಂಡೇಲು ಹಾಗೂ ಪಿ ಮುಹಮ್ಮದ್ ಪಾಣೆಮಂಗಳೂರು, ಮಂಚಿ ಗ್ರಾ ಪಂ ಅಧ್ಯಕ್ಷ ಜಿ ಎಂ ಇಬ್ರಾಹಿಂ, ಕೊಳ್ನಾಡು ಗ್ರಾ ಪಂ ಅಧ್ಯಕ್ಷ ಮುಹಮ್ಮದ್ ಅಶ್ರಫ್, ಪ್ರಮುಖರಾದ ಸೈಮನ್ ಡಿ ಸೋಜ, ಡಾ ರಾಜೇಶ್ ರೈ ಪಾಲ್ತಾಜೆ, ದಾಮೋದರ್ ಬಿ ಎಂ, ವೇಣುಗೋಪಾಲ ಕಾಮತ್ ಪುಚ್ಚಕೆರೆ, ಸುಂದರ ರಾವ್, ಜೇಸಿ ಸುಬ್ರಹ್ಮಣ್ಯ ಪೈ, ಪತ್ರಕರ್ತರಾದ ಸಂದೀಪ್ ಸಾಲ್ಯಾನ್, ಪಿ ಎಂ ಅಶ್ರಫ್ ಪಾಣೆಮಂಗಳೂರು, ಜನಾರ್ದನ, ಎಂ ಈಶ್ವರ ಭಟ್ ಕೈಯೂರು, ಪಿ ಎ ರಹೀಂ, ಸುಧಾಕರ ಆಚಾರ್ಯ, ಉಮೇಶ್ ಸಾಲಿಯಾನ್ ಬೆಂಜನಪದವು, ಗಣೇಶ್ ಪ್ರಭು, ಶ್ರೀನಿವಾಸ ಬಾಳಿಗಾ, ಬದ್ರುದ್ದೀನ್ ಕೈಯೂರು, ಉಮ್ಮರ್ ಕುಂಞÂ ಸಾಲೆತ್ತೂರು ಮೊದಲಾದವರು ಉಪಸ್ಥಿತರಿದ್ದರು.
0 comments:
Post a Comment