ಬಂಟ್ವಾಳ, ಜನವರಿ 31, 2024 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ಹೆದ್ದಾರಿ ದಾಟಲು ರಸ್ತೆ ಬದಿ ನಿಂತಿದ್ದ ಮಹಿಳೆಯೋರ್ವರು ಮೃತಪಟ್ಟ ಘಟನೆ ಬಿ ಮೂಡ ಗ್ರಾಮದ ಮಿತ್ತಬೈಲು ಜುಮಾ ಮಸೀದಿ ಮುಂಭಾಗದಲ್ಲಿ ಗುರುವಾರ ಮಧ್ಯಾಹ್ನ ವೇಳೆ ಸಂಭವಿಸಿದೆ.
ಮೃತ ಮಹಿಳೆಯನ್ನು ಪುದು ಗ್ರಾಮದ ನಿವಾಸಿ ಬೀಪಾತುಮ್ಮ ಎಂದು ಹೆಸರಿಸಲಾಗಿದೆ. ಇವರು ಗುರುವಾರ ಮಿತ್ತಬೈಲು ಮುಹಿಯುದ್ದೀನ್ ಜುಮಾ ಮಸೀದಿ ಸಭಾಂಗಣದಲ್ಲಿ ನಡೆದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಹಾಜರಾಗಿ ವಾಪಾಸು ಮನೆಗೆ ತೆರಳಲು ರಸ್ತೆ ದಾಟಲು ನಿಂತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮಧ್ಯಾಹ್ನ ಸುಮಾರು 1.30ರ ವೇಳೆಗೆ ಮಿತ್ತಬೈಲು ಮಸೀದಿ ಮುಂಭಾಗದಲ್ಲಿ ಹೆದ್ದಾರಿ ದಾಟಲು ರಸ್ತೆ ಬದಿ ನಿಂತಿದ್ದ ಬೀಪಾತಿಮ್ಮ ಅವರಿಗೆ ಮಂಗಳೂರು ಕಡೆಯಿಂದ ಬಂದ ಮಿಥುನ್ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯರು ಪಡೀಲ್ ಜನಪ್ರಿಯ ಆಸ್ಪತ್ರೆಗೆ ಸಾಗಿಸಿದರಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಸಹೋದರ ಸಯ್ಯದ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment