ಬಂಟ್ವಾಳ, ಜನವರಿ 15, 2025 (ಕರಾವಳಿ ಟೈಮ್ಸ್) : ಕೆದಿಲ ಗ್ರಾಮದ ಪೇರಮೊಗರು ಸಮೀಪದ ಸತ್ತಿಕಲ್ಲು ಎಂಬಲ್ಲಿ ಬುಧವಾರ ಮಧ್ಯಾಹ್ನ ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ನಿಂತಿದ್ದ ಯುವಕನಿಗೆ ಕಾರು ಡಿಕ್ಕಿ ಹೊಡೆದು ದಾರುಣವಾಗಿ ಮೃತಪಟ್ಟಿದ್ದಾನೆ.
ಮೃತ ಯುವಕನನ್ನು ಪೇರಮೊಗರು ಸಮೀಪದ ಕುದ್ಮಾನ್ ನಿವಾಸಿ ಅಬ್ಬಾಸ್ ಎಂಬವರ ಪುತ್ರ ಉಸ್ಮಾನ್ ಯಾನೆ ಚಪ್ಪಿ (24) ಎಂದು ಹೆಸರಿಸಲಾಗಿದೆ. ವೃತ್ತಿಯಲ್ಲಿ ಪೈಂಟರ್ ಆಗಿದ್ದ ಉಸ್ಮಾನ್ ಮಧ್ಯಾಹ್ನ ವೇಳೆ ರಸ್ತೆ ಬದಿ ಸ್ಕೂಟರ್ ನಿಲ್ಲಿಸಿ ಸ್ನೇಹಿತನಿಗಾಗಿ ಕಾಯುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸಮೇತ ಸವಾರ ಹತ್ತಿರದ ಚರಂಡಿಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆಗೆ ಸ್ಪಂದಿಸದ ಆತ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment