ಮಂಗಳೂರು, ಜನವರಿ 27, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ದೇಶದ 76ನೇ ಗಣರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಧ್ವಜಾರೋಹಣಗೈದರು. ಈ ಸಂದರ್ಭ ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ರಾಜ್ಯಸಭಾ ಸದಸ್ಯ ಬಿ ಇಬ್ರಾಹಿಂ, ಮಾಜಿ ಶಾಸಕ ಜೆ ರ್ ಲೋಬೊ, ಪ್ರಮುಖರಾದ ಪದ್ಮರಾಜ್ ಆರ್, ಸುರೇಶ್ ಬಳ್ಳಾಲ್, ಶಶಿಧರ್ ಹೆಗ್ಡೆ, ಜೆ ಅಬ್ದುಲ್ ಸಲೀಂ, ಪ್ರಕಾಶ್ ಸಾಲ್ಯಾನ್, ಕೆ ಕೆ ಶಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಬಿ ಎಂ ಅಬ್ಬಾಸ್ ಅಲಿ, ದಿನೇಶ್ ಮೂಳೂರು, ನೀರಜ್ ಪಾಲ್, ಚಂದ್ರಕಲಾ ಜೋಗಿ, ಕವಿತಾ ವಾಸು, ಮಂಜುಳಾ ನಾಯಕ್, ನಮಿತಾ ರಾವ್, ಟಿ ಹೊನ್ನಯ್ಯ, ಮನಪಾ ಸದಸ್ಯರು, ಕಾಂಗ್ರೆಸ್ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಭಾಗವಹಿಸಿದ್ದರು. ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿಸೋಜ ಧ್ವಜ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದರು.
0 comments:
Post a Comment