ಬಂಟ್ವಾಳ, ಜನವರಿ 15, 2025 (ಕರಾವಳಿ ಟೈಮ್ಸ್) : ಬೈಕುಗಳ ಮಧ್ಯೆ ಸಂಭವಿಸಿದ ಅಪಘಾತದಿಂದ 13 ವರ್ಷದ ಬಾಲಕಿ ಮೃತಪಟ್ಟು ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ತುಂಬೆ ಗ್ರಾಮದ ರಾಮಲ್ ಕಟ್ಟೆ ಎಂಬಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ.
ಮೃತ ಬಾಲಕಿಯನ್ನು ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಎಂದು ಹೆಸರಿಸಲಾಗಿದೆ. ಬೈಕ್ ಸವಾರ ಬಾಲಕಿಯ ತಂದೆ ಅಬ್ದುಲ್ ರಹಿಮಾನ್ ಹಾಗೂ ಇನ್ನೊಂದು ಬೈಕ್ ಸವಾರ ನೆತ್ತಕರೆ ನಿವಾಸಿ ರಂಜಿತ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ತಂದೆ ಅಬ್ದುಲ್ ರಹಿಮಾನ್ ಅವರು ಪುತ್ರಿಯನ್ನು ಮಂಗಳವಾರ ರಾತ್ರಿ ಮದ್ರಸದಿಂದ ಕರೆದುಕೊಂಡು ಬರುತ್ತಿದ್ದ ವೇಳೆ ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಪುತ್ರಿ ಇಸ್ಮತ್ ಆಯಿಷಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೆÇಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment