ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ
ಬಂಟ್ವಾಳ, ಜನವರಿ 06, 2025 (ಕರಾವಳಿ ಟೈಮ್ಸ್) : ಸಜಿಪಮೂಡ ಸರಕಾರಿ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರ ಕಾಲೇಜು ವಠಾರದಲ್ಲಿ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್ ಶ್ರೀಕಾಂತ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ ಸುಬ್ರಹ್ಮಣ್ಯ ಭಟ್ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಸಂಯಮ, ಶ್ರದ್ಧೆ, ವಿನಯ, ತಾಳ್ಮೆಯಿಂದ ಉತ್ತಮ ಶಿಕ್ಷಣ ಪಡೆದು ಪೋಷಕರಿಗೂ, ಕಲಿತ ಶಿಕ್ಷಣ ಸಂಸ್ಥೆಗೂ ಕೀರ್ತಿ ತರುವಂತಾಗಬೇಕು ಎಂದರು.
ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಕೊಟ್ಟಾರಿ, ಸುರೇಶ್ ಶೆಟ್ಟಿ ಕೊಯಮಜಲು, ಉಪನ್ಯಾಸಕರಾದ ಗಾಯತ್ರಿ, ಭಾರತಿ, ಯಶೋಧ, ಸಿಂಧುಜ, ಸುಂದರಿ, ಸಿಬ್ಬಂದಿಗಳಾದ ಲತಾ, ಸಂಜೀವ ಪೂಜಾರಿ, ವಿದ್ಯಾರ್ಥಿಗಳು, ಪೋಷಕರು ಭಾಗವಹಿಸಿದ್ದರು.
ಇದೇ ವೇಳೆ ನಿವೃತ್ತ ಪ್ರಾಂಶುಪಾಲ ಬಾಬು ಗಾಂವ್ಕರ್ ಅವರನ್ನು ಗೌರವಿಸಿ ಬೀಳ್ಕೊಡಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಕಾಲೇಜು ಪ್ರಾಂಶುಪಾಲ ಸುರೇಶ್ ಬಿ ಐತಾಳ ಸ್ವಾಗತಿಸಿ, ಪ್ರಸ್ತಾವನೆಗೈದರು. ಉಪನ್ಯಾಸಕರಾದ ಬಾಲಕೃಷ್ಣ ನಾಯ್ಕ್ ಕೆ ಬೆಳ್ಳಾರೆ ವರದಿ ವಾಚಿಸಿದರು, ಬಾಲಕೃಷ್ಣ ಎನ್ ವಿ ವಂದಿಸಿದರು. ಶೋಭಾ ಕೆ ಹಾಗೂ ಸ್ಪೂರ್ತಿ ಬಹುಮಾನಿತರ ಪಟ್ಟಿ ವಾಚಿಸಿದರು. ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಿತು.
0 comments:
Post a Comment