ಮಂಗಳೂರು, ಜನವರಿ 11, 2025 (ಕರಾವಳಿ ಟೈಮ್ಸ್) : ಕಳೆದ ಡಿಸೆಂಬ್ 20 ರಂದು ಪುತ್ತೂರು ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ ಮನೆಯೊಂದರ ಬಾಗಿಲು ಮುರಿದು ಚಿನ್ನಾಭರಣಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವನ್ನು ಜಿಲ್ಲಾ ಎಸ್ಪಿ ಅವರ ವಿಶೇಷ ಪೊಲೀಸ್ ತಂಡ ಶುಕ್ರವಾರ ಬೇಧಿಸುವಲ್ಲಿ ಸಫಲವಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳ ಸಹಿತ ಆರೋಪಿಯನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆ, ಉಪ್ಪಳ ನಿವಾಸಿ ಸೂರಜ್ ಕೆ (36) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಯಿಂದ 18 ಲಕ್ಷ ರೂಪಾಯಿ ಮೌಲ್ಯದ 200 ಗ್ರಾಂ ಚಿನ್ನಾಭರಣ, 3 ಲಕ್ಷ ರೂಪಾಯಿ ಮೌಲ್ಯದ ಮಾರುತಿ ಆಲ್ಟೋ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ, ವಿಟ್ಲ ಠಾಣೆ ಹಾಗೂ ಕಡಬ ಠಾಣಾ ಪೆÇಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪ್ರಕರಣ ಬೇಧಿಸಿದ್ದಾರೆ.
ಆರೋಪಿಯ ಬಂಧನದಿಂದಾಗಿ ಪುತ್ತೂರು ಗ್ರಾಮಾಂತರ, ಕಡಬ, ಬಂಟ್ವಾಳ ಗ್ರಾಮಾಂತರ ಹಾಗೂ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸುಮಾರು 7 ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ.
ಆರೋಪಿ ಪತ್ತೆ ಕಾರ್ಯಾಚರಣೆಯಲ್ಲಿ ಜಿಲ್ಲಾ ಎಸ್ಪಿ ಯತೀಶ್ ಎನ್, ಅಡಿಶನಲ್ ಎಸ್ಪಿ ರಾಜೇಂದ್ರ ಡಿ ಎಸ್ ಅವರ ಮಾರ್ಗದರ್ಶನದಲ್ಲಿ, ಪುತ್ತೂರು ಎಎಸ್ಪಿ ಅರುಣ್ ನಾಗೇಗೌಡ, ಬಂಟ್ವಾಳ ಡಿವೈಎಸ್ಪಿ ವಿಜಯ್ ಪ್ರಸಾದ್ ಅವರ ನಿರ್ದೇಶನದಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ರವಿ ಬಿ ಎಸ್, ವಿಟ್ಲ ಪೆÇಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಇ ಅವರ ನೇತೃತ್ವದ, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಸೈ ಜಂಬೂರಾಜ್ ಬಿ ಮಹಾಜನ್, ಪಿಎಸ್ಸೈ ಸುಷ್ಮಾ ಜಿ ಭಂಡಾರಿ, ಎಎಸ್‍ಐ ಮುರುಗೇಶ್, ಸಿಬ್ಬಂದಿಗಳಾದ ಉದಯ ರೈ, ರಾಧಾಕೃಷ್ಣ, ಪ್ರವೀಣ್ ರೈ ಪಾಲ್ತಾಡಿ, ಸ್ಕರಿಯ, ಅದ್ರಾಮ್, ಹರೀಶ್ ಗೌಡ, ಹರಿಶ್ಚಂದ್ರ, ಹರ್ಷಿತ್ ಗೌಡ, ಚಂದ್ರಶೇಖರ್ ಗೆಜ್ಜೆಳ್ಳಿ, ಶರಣಪ್ಪ ಪಾಟೇಲ್, ಶಂಕರ ಸಂಶಿ, ಗದಿಗಪ್ಪ, ವಿವೇಕ್, ಕುಮಾರ್ ಎಚ್, ನಾಗೇಶ್ ಕೆ ಸಿ, ಗಣಕ ಯಂತ್ರ ವಿಭಾಗದ ದಿವಾಕರ್ ಹಾಗೂ ಸಂಪತ್, ಚಾಲಕರಾದ ಯೋಗೇಶ್ ಹಾಗೂ ನಿತೇಶ್ ಕರ್ನೂರು ಅವರುಗಳನ್ನೊಳಗೊಂಡ ತಂಡ ಪಾಲ್ಗೊಂಡಿದೆ. ತನಿಖಾ ತಂಡಕ್ಕೆ ಜಿಲ್ಲಾ ಎಸ್ಪಿ ಅವರು ವಿಶೇಷ ಬಹುಮಾನ ಘೋಷಿಸಿದ್ದಾರೆ.
0 comments:
Post a Comment