ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರಕಾರ, ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರಕಾರ ಕೊಟ್ಟ ಕೊಡುಗೆ : ಸಿಎಂ ಸಿದ್ದರಾಮಯ್ಯ - Karavali Times ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರಕಾರ, ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರಕಾರ ಕೊಟ್ಟ ಕೊಡುಗೆ : ಸಿಎಂ ಸಿದ್ದರಾಮಯ್ಯ - Karavali Times

728x90

11 January 2025

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರಕಾರ, ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರಕಾರ ಕೊಟ್ಟ ಕೊಡುಗೆ : ಸಿಎಂ ಸಿದ್ದರಾಮಯ್ಯ

 ಯಾವುದೇ ಜಾತಿ-ಧರ್ಮ-ಭಾಷೆಯಿರಲಿ, ಮೊದಲು ನಾವು ಮಾನವರಾಗಿ ಗುರುತಿಸಿಕೊಳ್ಳಬೇಕು. ನಮ್ಮ ಸರಕಾರ ಇದೇ ಧ್ಯೇಯ ಹೊಂದಿದೆ ಎಂದ ಸಿಎಂ


ಸ್ಪೀಕರ್ ಖಾದರ್ ಸಾರಥ್ಯದ 3ನೇ ವರ್ಷದ ಲವ-ಕುಶ ನರಿಂಗಾನ ಕಂಬಳೋತ್ಸವಕ್ಕೆ ಅದ್ದೂರಿ ಚಾಲನೆ


ಮಂಗಳೂರು, ಜನವರಿ 11, 2025 (ಕರಾವಳಿ ಟೈಮ್ಸ್) : ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ನಾವು ಯಾವತ್ತೂ ವಿವಿಧತೆಯಲ್ಲಿ ಏಕತೆಯನ್ನು ಕಂಡು ಜೀವಿಸಬೇಕಾಗಿದೆ. ಯಾವುದೇ ಜಾತಿಯಿರಲಿ, ಧರ್ಮವಿರಲಿ, ಭಾಷೆಯಿರಲಿ, ವರ್ಗ-ಪಂಗಡವಿರಲಿ. ಮೊದಲು ನಾವು ಮಾನವರಾಗಿ ಗುರುತಿಸಿಕೊಳ್ಳಬೇಕು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದರು. 

ಸ್ಪೀಕರ್ ಯು ಟಿ ಖಾದರ್ ಸಾರಥ್ಯದಲ್ಲಿ ಉಳ್ಳಾಲ ತಾಲೂಕಿನ ನರಿಂಗಾನ ಸಮೀಪದ ಬೋಳ-ಮೋರ್ಲದಲ್ಲಿ ಶನಿವಾರ ಆರಂಭಗೊಂಡ 3ನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವದ ಸಭಾ ಕಾರ್ಯಕ್ರಮ ಸಂಜೆ ಉದ್ಘಾಟಿಸಿ ಮಾತನಾಡಿದ ಅವರು, ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ. ಜನಪದ ಕ್ರೀಡೆ ಕಂಬಳ ಸರ್ವ ಜಾತಿ-ಧರ್ಮದ ಜನ ಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ನಮ್ಮ ಸರಕಾರ ಕೂಡ ಎಲ್ಲಾ ಜಾತಿ, ಧರ್ಮದ ಪರವಾಗಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು. 

ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಮೂಲಕ ಕುಟುಂಬಗಳ ಮತ್ತು ಮಹಿಳಾ ಸಮಾಜದ ಆರ್ಥಿಕ ಶಕ್ತಿಯನ್ನು ಹೆಚ್ಚಿಸುವ ಕಾರ್ಯಕ್ರಮಗಳನ್ನು ಇಡೀ ದೇಶದಲ್ಲಿ ಮೊದಲಿಗೆ ಕೊಟ್ಟಿದ್ದು ನಮ್ಮ ಸರಕಾರ ಎಂದ ಸಿಎಂ 

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸಿ ಅವರು ಪ್ರತಿಭಟನೆ ಹಿಂತೆಗೆದುಕೊಳ್ಳುವಂತೆ ಮಾಡಿದ್ದು ನಮ್ಮ ಸರಕಾರ. ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ 10 ಸಾವಿರ ರೂಪಾಯಿ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ನಮ್ಮ ಸರಕಾರ ವಹಿಸಿಕೊಂಡಿದೆ ಎಂದರು. 

ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರಕಾರ. ಸುಪ್ರೀಂ ಕೋರ್ಟ್ ನಿಷೇಧವನ್ನು ತೆರವುಗೊಳಿಸಲು ನಮ್ಮ ಸರಕಾರ ಶ್ರಮಿಸಿತು. ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರಕಾರ ಕೊಟ್ಟ ಕೊಡುಗೆ ಎಂದ ಸಿಎಂ ತಮ್ಮ ಮನೆ ಮಕ್ಕಳಂತೆ ಕೋಣಗಳನ್ನು ಸಾಕುತ್ತಾರೆ. ಕಂಬಳ ಕ್ರೀಡೆ ಜಿಲ್ಲೆಯ ಜನಪದ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಈ ಸಾಂಪ್ರದಾಯಿಕ ಕ್ರೀಡೆಯನ್ನು ಉಳಿಸಲು ನಾನು ಮುಂದಾದೆ. 24 ಕಂಬಳಗಳನ್ನು ನಡೆಸಲು ಪ್ರತೀ ಕಂಬಳಕ್ಕೆ ತಲಾ 5 ಲಕ್ಷ ರೂಪಾಯಿ ನೆರವನ್ನು ನಮ್ಮ ಸರಕಾರ ನೀಡಿದೆ ಎಂದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರ ಬೇಡಿಕೆಯಂತೆ ತುಳು ಭಾಷೆಯನ್ನು ಎರಡನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು ಎಂದ ಸಿದ್ದರಾಮಯ್ಯ 5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯು ಟಿ ಖಾದರ್ ಅವರು ಸ್ಪೀಕರ್ ಆಗುವ ಮೂಲಕ ಪೆÇ್ರೀಟೋಕಾಲ್ ಪ್ರಕಾರ ನನಗಿಂತ ಎತ್ತರದಲ್ಲಿದ್ದಾರೆ. ಮುಂದೆ ಇದಕ್ಕಿಂತ ಒಳ್ಳೆಯ ಅವಕಾಶಗಳು ಸಿಗಬಹುದು. ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಯು.ಟಿ. ಖಾದರ್ ಅವರು ಸ್ಪೀಕರ್ ಆದ ಬಳಿಕ ತಮ್ಮ ಕ್ಷೇತ್ರದ ಅಭಿವೃದ್ಧಿಗೆ 1 ಸಾವಿರ ಕೋಟಿಯಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದ ಬಗ್ಗೆ ಅವರಿಗೆ ಅಷ್ಟೊಂದು ಪ್ರೀತಿ ಇದೆ ಎಂದು ಸಿಎಂ ಕೊಂಡಾಡಿದರು. 

ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಹಜ್ ಸಚಿವ ರಹೀಂ ಖಾನ್, ಮಾಜಿ ಸಚಿವ ಬಿ ರಮಾನಾಥ ರೈ, ಕೇರಳ ಸಂಸದ ಉಣ್ಣಿತ್ತಾನ್, ವಿಧಾನ ಪರಿಷತ್ ಸದಸ್ಯರುಗಳಾದ ಐವನ್ ಡಿ ಸೋಜ, ಮಂಜುನಾಥ ಭಂಡಾರಿ, ಮಾಜಿ ಸದಸ್ಯ ಹರೀಶ್ ಕುಮಾರ್, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಮೊದಲಾದವರು ಭಾಗವಹಿಸಿದ್ದರು. ಕಂಬಳ ಸಮಿತಿಯ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸ್ವಾಗತಿಸಿ, ಪ್ರಸ್ತಾವನೆಗೈದರು. ಅಬ್ದುಲ್ ರಝಾಕ್ ಕುಕ್ಕಾಜೆ ಕಾರ್ಯಕ್ರಮ ನಿರೂಪಿಸಿದರು. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಸುಪ್ರೀಂಕೋರ್ಟ್ ನಿಷೇಧಿಸಿದ್ದ ಕಂಬಳ ಕ್ರೀಡೆಗೆ ಮರು ಚಾಲನೆ ಸಿಗುವಂತೆ ಮಾಡಿದ್ದು ನಮ್ಮ ಸರಕಾರ, ಇದು ಕರಾವಳಿಯ ಜನಪದ ಸಂಸ್ಕೃತಿಗೆ ನಮ್ಮ ಸರಕಾರ ಕೊಟ್ಟ ಕೊಡುಗೆ : ಸಿಎಂ ಸಿದ್ದರಾಮಯ್ಯ Rating: 5 Reviewed By: karavali Times
Scroll to Top