ಬಂಟ್ವಾಳ, ಜನವರಿ 21, 2025 (ಕರಾವಳಿ ಟೈಮ್ಸ್) : ಜಗತ್ತಿನಲ್ಲಿ ಜಾತಿ, ಧರ್ಮ, ಬಣ್ಣ ಎಲ್ಲವನ್ನೂ ಮೀರಿ ಮಾನವೀಯತೆಯನ್ನು ಬಿಂಬಿಸುವ ಅತ್ಯಂತ ದೊಡ್ಡ ಏಕೈಕ ಉತ್ಸವ ಇದ್ದರೆ ಅದು ಕ್ರೀಡೋತ್ಸವ ಮಾತ್ರವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಹೇಳಿದರು.
ಬಂಟ್ವಾಳ-ಭಂಡಾರಿಬೆಟ್ಟು ಎಸ್ ವಿ ಎಸ್ ಮೈದಾನದಲ್ಲಿ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ, ಯುವವಾಹಿನಿ ಬಂಟ್ವಾಳ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಸಹಕಾರದೊಂದಿಗೆ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವದಲ್ಲಿ ಕ್ರೀಡಾಪಟುಗಳಿಂದ ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದ ಅವರು, ನಾಲ್ಕು ವರ್ಷಕ್ಕೊಮ್ಮೆ ನಡೆಯುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಜಗತ್ತಿನ ಎಲ್ಲಾ ದೇಶಗಳಿಂದಲೂ ಕ್ರೀಡಾಪಟುಗಳು ಎಲ್ಲವನ್ನೂ ಬದಿಗಿಟ್ಟು ಕೇವಲ ಕ್ರೀಡಾಪಟುಗಳಾಗಿ ಭಾಗವಹಿಸುತ್ತಾರೆ. ಕ್ರೀಡೆಯಲ್ಲಿ ಗೆಲ್ಲಬಹುದು, ಸೋಲಬಹುದು, ಸಾಧನೆ ಮಾಡಬಹುದು, ಮಾಡದೆ ಇರಬಹುದು. ಅದಕ್ಕಿಂತಲೂ ಮುಖ್ಯವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾ ಪ್ರೌಢಿಮೆ ಮೆರೆಯುವುದು ಅತ್ಯಂತ ಪ್ರಾಮುಖ್ಯತೆಯನ್ನು ಪಡೆಯುತ್ತದೆ ಎಂದರು.
ಕೇಂದ್ರದ ಮಾಜಿ ಮಂತ್ರಿ ಬಿ ಜನಾರ್ದನ ಪೂಜಾರಿ ಕ್ರೀಡಾಕೂಟ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಡಿವೈಎಸ್ಪಿ ಎಸ್ ವಿಜಯಪ್ರಸಾದ್ ಧ್ವಜಾರೋಹಣಗೈದರು. ಕೋಟಿ ಚೆನ್ನಯ ಜನ್ಮಸ್ಥಾನ ಸಂಚಾಲನಾ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಕ್ರೀಡಾ ಜ್ಯೋತಿ ಹಸ್ತಾಂತರಿಸಿದರು.
ಕ್ರೀಡಾಕೂಟದ ಸಂಚಾಲಕ ಬೇಬಿ ಕುಂದರ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಮೆಲ್ಕಾರ್, ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಶ್ರೀ ಕ್ಷೇತ್ರ ಕುದ್ರೋಳಿಯ ಅಧ್ಯಕ್ಷ ಎಚ್ ಎಸ್ ಸಾಯಿರಾಂ, ಕೋಶಾಧಿಕಾರಿ ಪದ್ಮರಾಜ್ ಆರ್, ಬೆಂಗಳೂರು ಬಿಲ್ಲವರ ಎಸೋಸಿಯೇಶನ್ ಅಧ್ಯಕ್ಷ ವೇದಕುಮಾರ್, ಮುಂಬೈ ಭಾರತ್ ಕೊ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ, ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ಮಾಜಿ ಶಾಸಕ ರುಕ್ಮಯ್ಯ ಪೂಜಾರಿ, ಪೊಲೀಸ್ ಅಧಿಕಾರಿ ಶಾಂತರಾಮ್ ಕುಂದರ್, ಉದ್ಯಮಿ ಸುನಿತ್ ಕಿಶನ್, ಅಬಕಾರಿ ಇಲಾಖಾ ಸಹಾಯಕ ಎಸ್ಪಿ ಗಾಯತ್ರಿ ಎಂ ಶಿವಕುಮಾರ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment